ಚಿತ್ರದುರ್ಗ : ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಅಪಘಾತವು ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ. 38 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಬಸ್ಸಿನಲ್ಲಿ 50 ಜನ ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.

RELATED ARTICLES  ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕುಮಟಾ ತಾಲೂಕಾ ಘಟಕದಿಂದ ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ : ಪ್ರತಿಭಾ ಪುರಸ್ಕಾರ : ಸರಕಾರಿ ನೌಕರರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸಂಪನ್ನ.

ಗಾಯಾಳುಗಳಿಗೆ ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 18 ಜನರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಹಾಗೂ ಮತ್ತೆ ಕೆಲವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಸುರೇಶ್, ಸಿಪಿಐ ಚಿಕ್ಕಣ್ಣನವರ ಭೇಟಿ ನೀಡಿದ್ದಾರೆ. ಬಸ್ ಅನ್ನು ಕ್ರೇನ್ ಮೂಲಕ ಎತ್ತಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

RELATED ARTICLES  ಶ್ರೀನಾಗ ಹಾಗೂ ರಜತ ನಾಯಕ ಜಿಲ್ಲಾ ಮಟ್ಟಕ್ಕೆ ಆಯ್ಕೆ.