Satwadhara News

ಮಳೆ, ಗಾಳಿಯ ಅಬ್ಬರಕ್ಕೆ‌ ಮುಳುಗಿದ ಬೋಟ್.

ಭಟ್ಕಳ : ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾಗಿ ಬೋಟ್‌ನಲ್ಲಿದ್ದ ನಾಲ್ಕು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಗಾಳಿಮಳೆಗೆ ಸಿಲುಕಿ ಮುಳುಗಡೆಯಾಗಿದೆ.

ಶನಿವಾರ ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಸಿಲುಕಿದ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನಲ್ಲಿದ್ದವರು ತಕ್ಷಣವೇ ನೆರವಿಗೆ ಧಾವಿಸಿದ್ದು, ಬೋಟ್‌ನಲ್ಲಿದ್ದ ಮೀನುಗಾರರ ರಕ್ಷಣೆ ಮಾಡಲಾಗಿದೆ.

ಇನ್ನೊಂದೆಡೆ ಕರಾವಳಿ ಜಿಲ್ಲೆಗಳಲ್ಲಿ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಏ.೨೦ ಮತ್ತು ಏ.೨೧ ರಂದು ಹವಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.