ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ವಿಭಾಗದವರು, 2 ವಿದ್ಯಾರ್ಥಿಗಳು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ವಿಭಾಗದವರು ಮತ್ತು 1 ವಿದ್ಯಾರ್ಥಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದವರಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ಯೂ ಸ್ಪೈಡರ್ಸ್ ನಿಂದ ಇತ್ತೀಚಿನ ತಂತ್ರಜ್ಞಾನಗಳಲ್ಲಿ ಉಚಿತ ತರಬೇತಿಯನ್ನು ನೀಡಿ ತರಬೇತಿಯ ನಂತರ ಉದ್ಯೋಗಾವಕಾಶ ನೀಡಲಾಗುತ್ತದೆ.

RELATED ARTICLES  ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಮಾಡಿದ ಪತಿ : ಮುರುಡೇಶ್ವರದಲ್ಲಿ ನಡೆದ ಘಟನೆ : ಆರೋಪಿಯನ್ನು ಬಂಧಿಸಿದ ಪೊಲೀಸರು.

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ,ಪ್ರಾಂಶುಪಾಲ ಡಾ.ಫಜಲುರ್ ರಹಮಾನ್, ರೆಜಿಸ್ಟ್ರಾರ್ ಪ್ರೊ.ಜಾಹಿದ್ ಖರೂರಿ, ಪ್ಲೇಸ್ ಮೆಂಟ್ ಅಧಿಕಾರಿ ಪ್ರೊ. ಶ್ರೀಶೈಲ್ ಭಟ್, ಹಾಗೂ ಉಳಿದ ಶಿಕ್ಷಕರು ಅಭಿನಂದಿಸಿದ್ದಾರೆ ಎಂದು ಮಾಧ್ಯಮ ಸಂವಹನಾಧಿಕಾರಿ
ಪ್ರೊಫೆಸರ್ ಸುಬ್ರಹ್ಮಣ್ಯ ಗಜಾನನ ಭಾಗವತ್, ಮಾಧ್ಯಮ ಗಳಿಗೆ ತಿಳಿಸಿದ್ದಾರೆ

RELATED ARTICLES  ದಸರೆಯ ರಜಾದ ಸವಿ ಸವಿಯಲು ಬಂದು ಸಮುದ್ರಕ್ಕಿಳಿದವರು ಅಪಾಯದ ಸುಳಿಯಲ್ಲಿ : ಮೂವರ ರಕ್ಷಣೆ ಮಾಡಿದ ಲೈಫ್ ಗಾರ್ಡ.