2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಕ್ಕೆ ಸಮಯ ನಿಗದಿಯಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ.

2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶಕ್ಕೆ (Karnataka sslc exam result 2024 ) ಸಮಯ ನಿಗದಿಮಾಡಿದೆ. ನಾಳೆ (ಮೇ 09) ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರುಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ನಾಳೆ ಇವರ ಭವಿಷ್ಯ ನಿರ್ಧಾರವಾಗಲಿದೆ.

ಕಳೆದ ವರ್ಷ, ಕರ್ನಾಟಕ ಬೋರ್ಡ್ ಎಸ್​ಎಸ್​ಎಲ್​ಸಿ ಫಲಿಶಾಂಶವನ್ನು ಮೇ 08 ರಂದು ಘೋಷಿಸಿತ್ತು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇ 83.89 ರಷ್ಟು ದಾಖಲಾಗಿತ್ತು. ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಎಸ್​ಎಸ್​ಎಲ್​​ಸಿಯಲ್ಲಿ ಅನುತ್ತೀರ್ಣರಾದರೆ ಮುಂದೇನು?
ನಾಳೆ ಫಲಿತಾಂಶದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು 3 ಬಾರಿ ಬರೆಯಬಹುದು. ಈ ಹಿಂದೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. 3 ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-2 ತೆಗೆದುಕೊಳ್ಳಬಹುದು. ಪರೀಕ್ಷೆ-2 ಅನುತ್ತೀರ್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-3 ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್‌ ಎಂದೇ ನಮೂದು ಆಗುತ್ತದೆ.