ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಟಿಯಲ್ಲಿ ಫಲಿತಾಂಶ ಪ್ರಕಟ ಮಾಡಿದೆ. ಮನೆಯಲ್ಲಿಯೇ ಕುಳಿತು ವಿದ್ಯಾರ್ಥಿಗಳು, ಪಾಲಕರು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಈ ಕೆಳಗಡೆ ಅಧಿಕೃತ ವೆಬ್‌ಸೈಟಿನ ಲಿಂಕ್ ನೀಡಲಾಗಿದೆ. ಆಸಕ್ತರು ಭೇಟಿ ನೀಡಿ, ಫಲಿತಾಂಶವನ್ನು ವೀಕ್ಷಿಸಬಹುದು.
ಉಡುಪಿ ಪ್ರಥಮ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಹಾಗು ಶಿವಮೊಗ್ಗ ಮೂರನೇ ಸ್ಥಾನದಲ್ಲಿದೆ. ಶೇಕಡಾ 84.54 ರಷ್ಟು ಫಲಿತಾಂಶದೊoದಿಗೆ ಉತ್ತರಕನ್ನಡ ಜಿಲ್ಲೆ ಐದನೇ ಸ್ಥಾನದಲ್ಲಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಶೇಕಡಾ 94 ರಷ್ಟು ಫಲಿತಾಂಶ ಬಂದಿದೆ. ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಬಾಗಲಕೋಟೆಯ ಅಂಕಿತಾ ಬಸಪ್ಪ ಪ್ರಥಮ ಸ್ಥಾನ ಪಡೆದಿದ್ದು 625ಕ್ಕೆ 625 ಅಂಕ ಪಡೆದಿದ್ದಾಳೆ. ಶೇಕಡಾ 73.40 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿಯವರಾಗಿದ್ದಾರೆ. ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.
ರಿಸಲ್ಟ್ ನೋಡೋದು ಹೇಗೆ? ಇಲಾಖೆಯ ಅಧಿಕೃತ ವೆಬ್ ಸೈಟ್‌ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಬಹುದು. ಅಲ್ಲದೆ, (SSLC Result) ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಾಹಿತಿ ನೀಡಿದೆ.