Home BHATKAL ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವು.

ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವು.

ಭಟ್ಕಳ : ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಹದಿನೈದು ಮಂದಿಗಳ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸೂರಜ್ ನಾಯ್ಕ (15),ಪಾರ್ವತಿ ಶಂಕರ ನಾಯ್ಕ (35) ಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಮೃತರು ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಸೇರಿ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದರು. ಈ ವೇಳೆ ಕಾಲು ಜಾರಿ ಇಬ್ಬರೂ ನೀರಿನಲ್ಲಿ ಮುಳುಗಡೆಯಾಗಿ ಮೃತಪಟ್ಟಿದ್ದಾರೆ. ಮೃತರ ಇಬ್ಬರೂ ಶವವನ್ನ ಹೊರತೆಗೆಯಲಾಗಿದೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ.