ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದಾದ್ಯಂತ ಇರುವ ವೈದ್ಯಕೀಯ ಸಂಸ್ಥೆಯಲ್ಲಿನ ವಿವಿಧ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಎನ್.ಟಿ.ಎ. ನಡೆಸುವ ನೀಟ್ – 2024 ರ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಅತ್ಯದ್ಭುತ ಸಾಧನೆ ಮಾಡಿ ಸಂಸ್ಥೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

RELATED ARTICLES  ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಲಮೂಲ ಬದಲಾವಣೆ ಬಗ್ಗೆ ಇನ್ನೊಮ್ಮೆ ಪರಾಮರ್ಶೆಗೆ ಸೂಚಿಸುವೆ ಎಂದ ಶಾಸಕ ದಿನಕರ ಶೆಟ್ಟಿ.

ಮೇ ತಿಂಗಳಿನಲ್ಲಿ ನಡೆದ ನೀಟ್ ಪರೀಕ್ಷೆಗೆ ವಿಧಾತ್ರಿ ಅಕಾಡೆಮಿಯು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿತ್ತು. ವಿದ್ಯಾರ್ಥಿಗಳ ಸತತ ಪ್ರಯತ್ನ, ಪಾಲಕರ ಆಶೀರ್ವಾದ ಹಾಗೂ ಉಪನ್ಯಾಸಕರುಗಳ ಮಾರ್ಗದರ್ಶನದ ಫಲವಾಗಿ ಕು. ಪ್ರಥಮ ಭಂಡಾರ್ಕರ್ 720ಕ್ಕೆ 643 ಅಂಕ ಹಾಗೂ ಕು. ಅದೈತ ಕಡ್ಲೆ 720ಕ್ಕೆ 636 ಅಂಕ ಗಳಿಸಿ ವೈದ್ಯಕೀಯ ಶಿಕ್ಷಣದ ಪ್ರವೇಶವನ್ನು ಪಡೆಯಲು ಅರ್ಹತೆಯನ್ನು ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತ್ಯುತ್ತಮ ಅಂಕಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳು; ಸರಸ್ವತಿ ಪಿಯು ಕಾಲೇಜಿನ ವಿದ್ಯಾರ್ಥಿಗಳಾಗಿರುವುದು ಕಾಲೇಜಿಗೆ ಹಾಗೂ ಕುಮಟಾಕ್ಕೆ ಹೆಮ್ಮೆಯ ಸಂಗತಿಯಾಗಿದೆ.

RELATED ARTICLES  ವಿಜ್ಞಾನ ಆವಿಷ್ಕಾರ ಮಾದರಿ ತಯಾರಿಕೆಯಲ್ಲಿ ರಾಜ್ಯಕ್ಕೆ ಪ್ರಥಮ.

ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.