ಕುಮಟಾ : ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಎನ್.ವಾಯ್. ಎಸ್., ಬಿ. ಫಾರ್ಮಾ, ಡಿ.ಫಾರ್ಮಾ, ಮುಂತಾದ ಕೋರ್ಸಗಳ ಪ್ರವೇಶಾತಿಗಾಗಿ ಕೆ.ಇ.ಎ. ನಡೆಸುವ ಕೆ.ಸಿ.ಇ.ಟಿ. 2024 ರ ಪರೀಕ್ಷೆಯಲ್ಲಿ ಅತ್ಯುತ್ತಮ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿರುತ್ತಾರೆ.

ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ವಿಧಾತ್ರಿ ಅಕಾಡೆಮಿಯು ನುರಿತ ಉಪನ್ಯಾಸಕರುಗಳ ಮೂಲಕ  ಕೆ.ಸಿ.ಇ.ಟಿ. ಪರೀಕ್ಷೆಗೆ ತರಬೇತಿಗೊಳಿಸಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗಿತ್ತು. ಕೃಷಿ ವಿಜ್ಞಾನ ವಿಭಾಗದಲ್ಲಿ ಅದೈತ್ ಕಡ್ಲೆ 304 ನೇ ಸ್ಥಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಕು. ಶ್ರೀಕೃಷ್ಣ ಶಾನಭಾಗ 894ನೇ ಸ್ಥಾನದೊಂದಿಗೆ ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕ್ರಮವಾಗಿ ಕೃಷಿ ವಿಜ್ಞಾನ ಹಾಗೂ ಇಂಜಿನಿಯರಿಂಗ್ ವಿಭಾಗಗಳಲ್ಲಿ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.

RELATED ARTICLES  ಮಹಿಳೆಯ ಮಾನಭಂಗಕ್ಕೆ ಯತ್ನ : ಆರೋಪಿಯನ್ನು ಬಂಧಿಸಿದ ಪೊಲೀಸರು.

ಕೃಷಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಭಂಡಾರ್ಕರ್ 1090 ನೇ ಸ್ಥಾನ ಹಾಗೂ ಶ್ರಾವ್ಯ ಭಟ್ಟ 2492 ನೇ ಸ್ಥಾನ ಪಡೆದು ಕಾಲೇಜಿಗೆ ದ್ವಿತೀಯ ಹಾಗೂ ತೃತೀಯ ಸ್ಥಾನಿಗಳಾಗಿದ್ದಾರೆ. 

ಇಂಜಿನಿಯರಿಂಗ್ ವಿಭಾಗದಲ್ಲಿ ಕು. ಅದೈತ್ ಕಡ್ಲೆ 1213ನೇ ಸ್ಥಾನ ಹಾಗೂ  ಕು. ಸಿಂಚನಾ ನಾಯ್ಕ್ 2196 ನೇ ಸ್ಥಾನ ಪಡೆದು ಕಾಲೇಜಿಗೆ ದ್ವಿತೀಯ ಹಾಗೂ ತೃತೀಯ ಸ್ಥಾನಿಗಳಾಗಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಹತ್ತು ಸಾವಿರದೊಳಗೆ ಹದಿನಾಲ್ಕು ವಿದ್ಯಾರ್ಥಿಗಳು ಉತ್ತಮ ಸ್ಥಾನಗಳಿಸಿ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಸ್ಪರ್ಧಾತ್ಮಕ ಪರೀಕ್ಷಾ ಸಂಯೋಜಕರಾದ ಪ್ರಸನ್ನ ಹೆಗಡೆ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭವನ್ನು ಹಾರೈಸಿದ್ದಾರೆ.

RELATED ARTICLES  ಕುಮಟಾದ ಸೌರಭಕ್ಕೆ ಶ್ರೀಕಾಂತ ಭಟ್ಟ ಸಾರಥ್ಯ : ಅರುಣ ಹೆಗಡೆ ಪ್ರಧಾನ ಕಾರ್ಯದರ್ಶಿ