ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ. ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

RELATED ARTICLES  ಚೆನ್ನಭೈರಾದೇವಿ ಕಾದಂಬರಿ ಎರಡನೇ ಆವೃತ್ತಿ ಬಿಡುಗಡೆ ಸಮಾರಂಭ ಜುಲೈ 17 ಕ್ಕೆ

ಇದೇರೀತಿ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ಶುಕ್ರವಾರ (ಜುಲೈ 5) ಜಿಲ್ಲಾಡಳಿತ ರಜೆ ಘೋಷಿಸಿದೆ.

RELATED ARTICLES  ಭಾರತೀಯ ರೈಲ್ವೆ ಇಲಾಖೆ: ಪಶ್ಚಿಮ ವಿಭಾಗದಲ್ಲಿ1944 ಹುದ್ದೆಗಳಿಗೆ ಅರ್ಜಿ ಆಹ್ವಾನ.

ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಐಟಿಐ ಹೊರತುಪಡಿಸಿ, ಪದವಿ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ತರಗತಿಗಳು ಕಾರ್ಯನಿರ್ವಹಿಸಲಿದೆ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.