ಅಂಕೋಲಾ : ಜಿಲ್ಲೆಯಲ್ಲಿ ರಣಭೀಕರ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ೬೬ರ ಶಿರೂರು ಬಳಿ ಭಾರೀ ಗುಡ್ಡಕುಸಿತ ಸಂಭವಿಸಿದೆ. ಅಂಗಡಿಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿವೆ. ಐದಕ್ಕೂ ಹೆಚ್ಚು ಮಂದಿ ಗುಡ್ಡದ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಒಂದೇ ಕುಟಂಬದ ಐವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ(11), ಅವಂತಿಕಾ(6), ಜಗನ್ನಾಥ(55) ಎಂಬುವವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ.
ಐವರು ಸದಸ್ಯರ ಕುಟುಂಬ ವಾಸವಿದ್ದ ಅಂಗಡಿ ಮೇಲೆ ಗುಡ್ಡ ಕುಸಿದಿದೆ. ಗ್ರಾಹಕರು ಸೇರಿ ಮನೆಯವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಅಂಕೋಲಾ-ಕುಮಟಾ ನಡುವೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಐಆರ್‌ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್‌ಹೆಚ್‌ಎಐ ಆಂಬ್ಯುಲೆನ್ಸ್ ದೌಡಾಯಿಸಿದೆ.