ಕಾರವಾರ : ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಜಿಲ್ಲಾಧಿಕಾರಿ ಗುರುವಾರ ಜುಲೈ 25ರಂದು ರಜೆ ಘೋಷಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇರಿ ಹಾಗೂ ಜೋಯಿಡಾ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಅನುದಾವಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳು ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.

RELATED ARTICLES  ಸಾಧಕರನ್ನು ಗುರ್ತಿಸಿ ಸನ್ಮಾನಿಸಿದ ಕುಮಟಾ ಅರ್ಬನ್ ಬ್ಯಾಂಕ್