ಕಾರವಾರ : ಭಾರತೀಯ ಹವಾಮಾನ ಇಲಾಖೆ ತಿಳಿಸಿದಂತೆ ಜುಲೈ 28 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆಯಿದೆ. ಹೀಗಾಗಿ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು ಜಿಲ್ಲೆಯ ಹಲವು ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.

ಬಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿದ್ದು ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯ ಇರುವ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾ‌ರ್ ತಿಳಿಸಿದ್ದಾರೆ.

RELATED ARTICLES  ಕ್ಯಾಮರಾದಲ್ಲಿ ಬೈಕ್ ನಂಬರ್ ನೊಂದಣಿಯಾದ್ರೆ ಪೈನ್ ಗ್ಯಾರಂಟಿ : ಅದು ಹೇಗೆ ಗೊತ್ತೇ?
1000426442

ಹೀಗಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿಗಳು ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ, ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಪದವಿ ಪೂರ್ವ ಕಾಲೇಜುಗಳಿಗೆ ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಜುಲೈ 27 ರಂದು ರಜೆ ಘೋಷಿಸಿದ್ದಾರೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆಯಾ ಡಿಡಿಪಿಐ ಗೆ ಸೂಚಿಸಲಾಗಿದೆ.

RELATED ARTICLES  ಹೊನ್ನಾವರದಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ
IMG 20240726 WA0048