ಕಾರವಾರ : ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 01.08.2024 ರ ಮಧ್ಯಾಹ್ನ 1:00 ಗಂಟೆಯಿಂದ ದಿನಾಂಕ 02-08-2024 ರ ಬೆಳಿಗ್ಗೆ 08-30 ರವರೆಗೆ ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್)ನ್ನು ನೀಡಿರುತ್ತದೆ. ಜಿಲ್ಲೆಯ ಉಪ ನಿರ್ದೇಶಕರು ಶಾ.ಶಿ.ಇ ಕಾರವಾರ/ಶಿರಸಿ ಹಾಗೂ ಸಹಾಯ ಆಯುಕ್ತರರು ಹಳ್ಳಕೊಳ್ಳಗಳು ಭಾರಿ ಮಳೆಯಿಂದ ತುಂಬಿದ್ದು ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯ ಬಗ್ಗೆ ವಿವರಿಸಿರುತ್ತಾರೆ.

ಜಿಲ್ಲೆಯ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಧಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ದಿಪ್ಲೋಮಾ ಕಾಲೇಜುಗಳಿಗೆ ದಿನಾಂಕ: 02-08-2024 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಮಾಡಿರುತ್ತಾರೆ.

RELATED ARTICLES  ಸುವರ್ಣ ಗದ್ದೆಯಲ್ಲಿ ನಡೆದ ಸಮಾರಂಭದಲ್ಲಿ ‘ಹೊನ್ನ ಹರಿವಾಣ’ ಲೋಕಾರ್ಪಣೆ

ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೋನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ, ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ,ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಮುಂಜಾಗೃತ ಕ್ರಮವಾಗಿ ದಿನಾಂಕ: 02-08-2024 ರಂದು ರಜೆ ನೀಡಲಾಗಿದೆ.

RELATED ARTICLES  ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕದ ಸಾಧನೆ

ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ, ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎಂದೂ ತಿಳಿಸಲಾಗಿದೆ.