ಕಾರವಾರ: ಮುಂದಿನ ಏಳು ವರ್ಷದ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಕುರಿತು ಸಿದ್ಧಪಡಿಸಲಾಗಿರುವ ಮಿಶನ್ 2025 ಕಾರ್ಯಾಗಾರವನ್ನು ಸಾರ್ವಜನಿಕ ಇಲಾಖೆ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಜನರಿಂದ ಸಲಹೆ ಪಡೆಯಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ ಚಿಂತನಾ ಸಭೆ ನಡೆಸುತ್ತಿದೆ. ಎಲ್ಲರನ್ನೂ ಒಗ್ಗೂಡಿಸಿ ಕರೆದೊಯ್ಯುವ ಮಹತ್ವಾಕಾಂಕ್ಷೆಯೊಂದಿಗೆ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಈಗಾಗಲೇ 14 ಜಿಲ್ಲೆಗಳಲ್ಲಿ ಕಾರ್ಯಗಾರ ನಡೆಸಿ, ಅದರ ವರದಿಯನ್ನು ರಚಿಸಲಾಗಿದ ಎಂದರು.
ಸಭಾ ಕಾರ್ಯಕ್ರಮದ ನಂತರ ವಿವಿಧ ಗುಂಪುಗಳನ್ನು ರಚಿಸಿಕೊಂಡು ಚರ್ಚೆ ನಡೆಸಲಾಯಿತು. ಪ್ರಮುಖ ಐದು ವಿಷಯಗಳ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

RELATED ARTICLES  Free of charge Non Income Board Management Software

ಜಿಲ್ಲಾಧಿಕಾರಿ ಎಸ್.ಎಸ್. ನಕುಲ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರಿ ಮೋಗೇರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಚಂದ್ರಶೇಖರ ನಾಯ್ಕ, ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ, ಶಾಸಕ ಸತೀಶ ಸೈಲ್ ಇದ್ದರು. ಸುರೇಶ ಶಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

RELATED ARTICLES  ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ