ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಗಾಳಿ ಪ್ರಭಲವಾಗಿದ್ದರೆ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. (ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು) ಈಗಿನಂತೆ ನವೆಂಬರ್ 17ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ನವೆಂಬರ್ 19ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇವತ್ತೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 17ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ.

RELATED ARTICLES  ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ.

ಒಳನಾಡು : ಉತ್ತರ ಒಳನಾಡಿನ, ಬಳ್ಳಾರಿ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

vidhatri
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ತುಮಕೂರು, ಹಾಗೂ ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

RELATED ARTICLES  ಚಂದ್ರಗ್ರಹಣ ಪ್ರಯುಕ್ತ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ದೇವರ ದರ್ಶನ/ಪೂಜಾ ಸಮಯದಲ್ಲಿ ಬದಲಾವಣೆ

ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 18ರಿಂದ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಕರಾವಳಿ ಭಾಗಗಳಲ್ಲಿ ನವೆಂಬರ್ 20ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.