ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾಸನ ಮೂಲದ ಸಕಲೇಶಪುರದನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿತ್ತು.
ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ನಟಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಶನಿವಾರ (ನವೆಂಬರ್ 30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣ ಆಗಿದೆ.
ಶೋಭಿತಾ ಮದುವೆ ಆದಾಗಿಂದ ಇಂಡಸ್ಟ್ರಿಯಿಂದ ಅಂತರ ಕಾಯ್ದುಕೊಂಡಿದ್ದರು. ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರುವ ಸಾಧ್ಯತೆ ಇದೆ. ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.