ಬೆಂಗಳೂರು : ಮಾಜಿ ಪ್ರಧಾನ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಕರ್ನಾಟಕ ಸರಕಾರ ರಾಜ್ಯದಲ್ಲಿ ಸರಕಾರಿ ರಜೆ ಘೋಷಿಸಿದೆ. ಶಾಲೆ, ಕಾಲೇಜುಗಳಿಗೆ ಕೂಡ ರಜೆ ನೀಡಲಾಗಿದೆ.
ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನೂ ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ನಾಳೆ 10.30ಕ್ಕೆ ಶೃದ್ಧಾಂಜಲಿ ಸಭೆ ನಡೆಸಲಾಗುವುದು. ದೆಹಲಿಯಿಂದ ಬೆಳಗಾವಿಗೆ ಆಗಮಿಸಿರುವ ಎಲ್ಲ ಗಣ್ಯರನ್ನು ಕಳಿಸಲು ಸಕಲ ವ್ಯವಸ್ಥೆ ಮಾಡಲಾಗುವುದು. ನಾನು ಹಾಗೂ ಮುಖ್ಯಮಂತ್ರಿಗಳು ಮತ್ತು ಕೆಲವು ಹಿರಿಯ ಸಚಿವರು ಸಹ ದೆಹಲಿಗೆ ತೆರಳಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.