ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜ. 3 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

RELATED ARTICLES   ರಕ್ತಹೀನತೆಗೆ ಈರುಳ್ಳಿ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

RELATED ARTICLES  ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (ನಬಾರ್ಡ) ನಲ್ಲಿನ ಅಭಿವೃದ್ದಿ ಸಹಾಯಕ ಹುದ್ದೆಗಳಿಗೆ ನೇಮಕಾತಿ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.