ಕಾರವಾರ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಕಾರವಾರ ಅಂಚೆ ವಿಭಾಗದಲ್ಲಿ ಒಟ್ಟೂ 32 ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ 18 ರಿಂದ 40 ವರ್ಷಗಳು. ವಿದ್ಯಾರ್ಹತೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು 10ನೇ ತರಗತಿಯಲ್ಲಿ ಒಂದು ಭಾಷೆಯನ್ನಾಗಿ ಅಧ್ಯಯನ ಮಾಡಿರಬೇಕು. ಬೇರೆ ಯಾವುದೇ ವಿಧಾನದ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಮಧ್ಯವರ್ತಿಗಳ ಮೂಲಕ, ಪರೀಕ್ಷೆ, ಸಂದರ್ಶನ ಇರುವುದಿಲ್ಲ. ಎಸ್.ಎಸ್.ಎಲ್.ಸಿ ಗರಿಷ್ಠ ಅಂಕ ಮಾನದಂಡದಲ್ಲಿ ನೇಮಕಾತಿ ನಡೆಯಲ್ಲಿದ್ದು ಅರ್ಜಿ ಸಲ್ಲಿಸುವ ಮೊದಲು ವೆಬ್‌ಸೈಟ್ https://indiapostgdsonline.gov.in ಆಲೈನ್ ಮೂಲಕ ಅರ್ಜಿಸಲ್ಲಿಸಲು ಮಾ.3 ಕೊನೆಯ ದಿನವಾಗಿದ್ದು, ಆಸಕ್ತರು https://indiapostgdsonline.gov.in ಅರ್ಜಿ ಸಲ್ಲಿಸಬಹುದು. ದೇಶದಾದ್ಯಂತ ಖಾಲಿ ಇರುವ 21413 ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಏಕಾಕಾಲಕ್ಕೆ ನಡೆಯುತ್ತಿದ್ದು ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾರವಾರ ವಿಭಾಗದ ಅಂಚೆ ಅಧೀಕ್ಷಕ ಧನಂಜಯ ಆಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.