ಈಗಾಗಲೇ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ನೀಡಿ, ಸಂಸ್ಥೆಯ ಹೆಸರನ್ನು ಉತ್ತುಂಗಕ್ಕೆ ಏರಿಸಿರುವ, ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳು ಗುರುತಿಸಿಕೊಳ್ಳುವಂತೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳು, ವಿಧಾತ್ರಿ ಅಕಾಡೆಮಿ ಜೊತೆಗೆ ಕೈಜೋಡಿಸಿದ್ದು, ವಿದ್ಯಾಗಿರಿಯಲ್ಲಿರುವ ಸರಸ್ವತಿ ಪಿ.ಯು ಕಾಲೇಜಿನಲ್ಲಿ ನಿರಂತರವಾಗಿ ಇನ್ನು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲಿದ್ದಾರೆ.
ಉತ್ತರಕನ್ನಡದಲ್ಲಿ ಮಾದರಿ ಶಿಕ್ಷಣ ವ್ಯವಸ್ಥೆ ನೀಡುವ ಸಂಕಲ್ಪದೊಂದಿಗೆ ವಿಧಾತ್ರಿ ಅಕಾಡೆಮಿ ಮಂಗಳೂರು ಇವರು ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಿಜ್ಞಾನ ವಿಭಾಗವನ್ನು ಮುನ್ನಡೆಸಿಕೊಂಡು ಬಂದಿದ್ದು, ಅತ್ಯುತ್ತಮ ಫಲಿತಾಂಶ ನೀಡುವ ಮೂಲಕ ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ.

ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ನಿರಂತರ 100% ಜೊತೆಗೆ, ಉತ್ತರಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನವನ್ನೂ, ರಾಜ್ಯಕ್ಕೆ ಐದನೇ ಸ್ಥಾನವನ್ನೂ ದಾಖಲಿಸಿದ್ದು ಸಂಸ್ಥೆಯ ಹೆಮ್ಮೆ. ಇದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಮಹತ್ವವನ್ನು ಅರಿತ ವಿಧಾತ್ರಿ ಬಳಗದವರು ನಿರಂತರವಾಗಿ CET, JEE, NEET ನ ತರಬೇತಿಯನ್ನು ತಮ್ಮದೇ ನುರಿತ ಉಪನ್ಯಾಸಕರುಗಳಿಂದ ಇದುವರೆಗೂ ನೀಡುತ್ತಾ ಬಂದಿರುವುದು ಹಾಗೂ ಯಶದ ಹಾದಿಯಲ್ಲಿ ಮುನ್ನಡೆಯುತ್ತಿರುವುದು ಗಮನಾರ್ಹವಾದುದು.

ಸರಸ್ವತಿ ಪಿ.ಯು ಕಾಲೇಜಿನಲ್ಲಿ ಕಲಿತು ತೇರ್ಗಡೆಯಾದ ವಿದ್ಯಾರ್ಥಿಗಳು ರಾಜ್ಯಮಟ್ಟದ ಉತ್ತಮ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ಈಬಾರಿಯ JEE Mains ಪರೀಕ್ಷೆಯ ಫಲಿತಾಂಶದಲ್ಲಿಯೂ ಸಾಧನೆಯ ಯಶೋಗಾಥೆ ಮುಂದುವರೆದಿದೆ. ಈ ಎಲ್ಲಾ ಸಾಧನೆಯ ಜೊತೆ ಜೊತೆಗೇ ವಿಧಾತ್ರಿ ಅಕಾಡೆಮಿ ತನ್ನ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಬಹುದೊಡ್ಡ ಸಾಧನೆಯ ಹಾದಿಗೆ ದಾರಿದೀಪವಾಗಲು ಬಯಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆಯ ಶೃಂಗವನ್ನು ಏರುವ ಸಂಕಲ್ಪದೊಂದಿಗೆ ಸಂಸ್ಥೆಯು ಈಗಾಗಲೇ ರಾಷ್ಟ್ರದ ಬೇರೆ ಬೇರೆ ಕಡೆಗಳಲ್ಲಿ ಬಹುಬೇಡಿಕೆಯ ತರಬೇತುದಾರನ್ನು ಸಂಪರ್ಕಿಸಿ, ಸಂಸ್ಥೆಯ ಜೊತೆಗೆ ಹೊಂದಿಸಿಕೊಂಡಿದ್ದು, ಬರುವ ಶೈಕ್ಷಣಿಕ ವರ್ಷದ ಆರಂಭದಿಂದಲೇ ಈ ತರಬೇತುದಾರರು ಕುಮಟಾದ ಸರಸ್ವತಿ ಪಿ.ಯು ಕಾಲೇಜಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ.
ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಉಪನ್ಯಾಸಕರ ಸಹಯೋಗದೊಂದಿಗೆ, ರಾಷ್ಟ್ರೀಯಸ್ಥರದ ಸಂಪನ್ಮೂಲ ವ್ಯಕ್ತಿಗಳನ್ನೂ ಸಮನ್ವಯಗೊಳಿಸಿಕೊಂಡು ಉತ್ಕೃಷ್ಟ ತರಬೇತಿ ನೀಡಿ, ಶೈಕ್ಷಣಿಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಸನ್ನಧರಾಗುವಂತೆ ಮಾಡಲಾಗುತ್ತದೆ. ವಿಧಾತ್ರಿ ಅಕಾಡೆಮಿಯ ಈ ನಿರ್ಣಯ ಜಿಲ್ಲೆಯ ವಿದ್ಯಾರ್ಥಿಗಳು ಜಿಲ್ಲೆಯಲ್ಲಿಯೇ ಉಳಿದು ಉತ್ತಮ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ವರದಾನವಾಗಲಿದೆ.