ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಮಂತ್ರಿ ಕಚೇರಿಯ ಎರಡನೇ ಮಹಡಿಯಲ್ಲಿ ಇಂದು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

ಬೆಳಗಿನ ಜಾವ 3.45 ರ ಸುಮಾರಿಗೆ ಪ್ರಧಾನ ಮಂತ್ರಿ ಕಾರ್ಯಾಲಯ ಎರಡನೇ ಮಹಡಿಯ ಕೊಠಡಿ ಸಂಖ್ಯೆ 242 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಮಾಧ್ಯಮ ವರದಿ ಮಾಡಿದೆ.

RELATED ARTICLES  ಶ್ರೀ ಜಯದೇವ ಬಳಗಂಡಿಯವರ ಸಾಂಪ್ರದಾಯಿಕ ಹಾಡಿನ ವಿಡಿಯೋ.

ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, 20 ನಿಮಿಷದೊಳಗೆ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ರಕ್ಷಣಾ ಸಿಬ್ಬಂದಿಗಳು ಹೇಳಿದ್ದಾರೆ. ಕಂಪ್ಯೂಟರ್ ನ ಯುಪಿಎಸ್ ನಲ್ಲಿ ಸ್ಪಾರ್ಕ್ ಉಂಟಾಗಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ರಕ್ಷಣಾ ಸಿಬ್ಬಂದಿಗಳು ಹೇಳಿದ್ದಾರೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.

RELATED ARTICLES  ಹೆಲ್ಪ ಮಾಡ್ತೇನೆ ಎಂದು ಬಂದವನು ಹಣ ಲಪಟಾಯಿಸಿದ