ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಶಿವಗಂಗಾ ವಿವಾಹೋತ್ಸವವು ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಆಶ್ವೀಜ ಬಹುಳ ಚತುರ್ದಶಿ ದಿನ ವೈಭವದಿಂದ ಜರುಗಿತು .

DSC 0581

ಶ್ರೀ ಕ್ಷೇತ್ರ ಗೋಕರ್ಣದ ವಿಶಾಲವಾದ ಮಹಾಬಲೇಶ್ವರ ಕಡಲ ತೀರದಲ್ಲಿ ಸೂರ್ಯ ಪಶ್ಚಿಮಾ೦ಬುಧಿಗೆ ತೆರಳುತ್ತಿರುವ ಗೋಧೂಳಿ ಮುಹೂರ್ತದಲ್ಲಿ ಸಹಸ್ರಾರು ಭಕ್ತ ಜನರ ಸಮ್ಮುಖದಲ್ಲಿ ನಿಶ್ಚಯಿತ ವಧುವಾಗಿ ಬಂದ ಗಂಗಾಮಾತೆ ಜಗದೀಶ್ವರನನ್ನು ವಿವಾಹವಾದಳು.

RELATED ARTICLES  ರೇಷನ್ ವಿತರಣೆಯನ್ನು ಸರಳಿಕರಣ ಮಾಡುವಂತೆ ಆಗ್ರಹಿಸಿ ಮನವಿ

ಕಡಲಿನ ಅಬ್ಬರ, ವಾದ್ಯಘೋಷ , ವೇದಘೋಷ, ವಿಶಿಷ್ಟ ತೋರಣ, ಜಾನಪದ ಹಾಡುಗಳು ಉತ್ಸವಕ್ಕೆ ಮೆರುಗನ್ನು ನೀಡಿದವು. ಭಕ್ತರು ಆರತಿ ನೀಡಿ ದೇವದಂಪತಿಗಳನ್ನು ಬರಮಾಡಿಕೊಂಡರು .

RELATED ARTICLES  500 ನೇ ದಿನಕ್ಕೆ‌ ಕಾಲಿಡುತ್ತಿದೆ "ಗೋಕರ್ಣ ಗೌರವ"

ವಿವಾಹ ಮಹೋತ್ಸವದ ನಂತರ ಶಿವ -ಗಂಗೆಯರು ಶ್ರೀ ದೇವಾಲಯದ ‘ಅಮೃತಾನ್ನ’ ಭೋಜನ ಶಾಲೆಗೆ ಚಿತ್ತೈಸಿ ಸುಂದರವಾಗಿ ಶೃಂಗಾರಗೊಂಡ ಮಂಟಪದಲ್ಲಿ ದೇವರಾಜೋಪಚಾರ ಪೂಜೆ ಸ್ವೀಕರಿಸಿದರು. ಆನಂತರ ಪ್ರಸಾದ ವಿತರಣೆ ನಡೆಯಿತು . ಉಪಾಧಿವಂತ ಮಂಡಲದ ಸದಸ್ಯರು, ಊರ ನಾಗರಿಕರು, ಎಲ್ಲ ಸಮಾಜದ ಬಂಧುಗಳು ಉಪಸ್ಥಿತರಿದ್ದರು