ಕುಮಟಾ: ಇದೇ ನವೆಂಬರ್ ೧೯ ರಂದು ಜಿಲ್ಲೆಯ ಕುಮಟಾದ ಮಣಕಿಯಲ್ಲಿ ‘ರಾಜ್ಯ ಮೀನುಗಾರರ ಕಾಂಗ್ರೆಸ್’ ಆಯೋಜಿಸಿರುವ ಬೃಹತ್ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಮೀನುಗಾರರ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಯು.ಆರ್. ಸಭಾಪತಿ, ಕುಮಟಾದಲ್ಲಿ ನಡೆಯಲಿರುವ ಮೀನುಗಾರರ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

RELATED ARTICLES  ಉಜ್ವಲ ಯೋಜನೆಯನ್ನು ಮನೆ ಮನೆಗೆ ತಲುಪಿಸುತ್ತಿದೆ ಬೆಳಕು ಸಂಸ್ಥೆ.

ಈ ಸಮಾವೇಶದಲ್ಲಿ ಕರಾವಳಿಯ ಉತ್ತರ ಕನ್ನಡ , ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 1 ಲಕ್ಷಕ್ಕೂ ಮಿಕ್ಕಿ ಮೀನುಗಾರರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

RELATED ARTICLES  ಜಿಲ್ಲೆ ಸುತ್ತಾಡಿ ಮಾಹಿತಿ ಕಲೆಹಾಕುತ್ತಿರುವೆ : ಜಿಲ್ಲಾಧಿಕಾರಿ

ಕೇಂದ್ರ ಸಂಪುಟದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಖಾತೆ ತೆರೆಯಬೇಕು. ಮೀನುಗಾರ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕು. ಹಾಗೂ ಇನ್ನೂ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.