ಕುಮಟಾ; ರಾಜ್ಯಾದ್ಯಂತ ಕರ್ನಾಟಕ ರಾಜ್ಯ ಸವಿತಾ ಸಮಾಜ ತಮ್ಮ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ಸ್ಥಾಪಿಸುವಂತೆ ಒತ್ತಾಯಿಸುತ್ತಿದೆ .ಮುಂದೆ ಬರುವ 2018-19ನೇ ಸಾಲಿನ ಬಜೆಟ್ನಲ್ಲಿ ಸವಿತಾ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಘೋಷಿಸಬೇಕೆಂದು ಈ ಮನವಿಯಲ್ಲಿ ಒತ್ತಾಯಿಸಲಾಗಿದೆ .ಈ ಎಲ್ಲ ಅಂಶಗಳನ್ನು ಒಳಗೊಂಡಿರುವ ಮನವಿಯನ್ನು ಕುಮಟಾ.ಹೊನ್ನಾವರ ತಾಲ್ಲೂಕಿನ ಶಾಸಕರು ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ್ ಶೆಟ್ಟಿ ಅವರಿಗೆ ನೀಡಲಾಯಿತು.
ಈ ವೇಳೆ ಮಾತನಾಡಿದ ತಾಲೂಕು ಸವಿತಾ ಸಮಾಜದ ಮುಖಂಡರಾದ ಕೆಎಲ್ ಮಂಜುನಾಥ್ ನಮ್ಮ ಮುಖ್ಯಮಂತ್ರಿಗಳು ಕಳೆದ ಮೂರು ವರ್ಷಗಳಿಂದ ನಮ್ಮ ಸಮಾಜದ ಬೇಡಿಕೆಯನ್ನು ಪರಿಗಣಿಸಲು ಮನಸ್ಸು ಮಾಡುತ್ತಿಲ್ಲ. ಈ ಕಾರಣದಿಂದ ಅಳದಿದ್ದರೆ ತಾಯಿ ಕೂಡ ಹಾಲು ಕೊಡುವುದಿಲ್ಲ ಎಂಬ ಗಾದೆಯಂತೆ ಹೋರಾಟದ ಮೂಲಕ ನಮ್ಮ ಸಮಾಜಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು. ಮತ್ತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಕೂಡ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.
ಮನವಿಗೆ ಸಾಧ್ಯವಾದಷ್ಟು ಶೀಘ್ರದಲ್ಲಿ ಸ್ಪಂಧಿಸುವ ಭರವಸೆಯನ್ನು ಶಾಸಕರು ನೀಡಿದ್ದಾರೆ.