ನವದೆಹಲಿ: ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ವ್ಯಕ್ತಪಡಿಸುವ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆಯುತ್ತಿರುವ ದಾಳಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ, ಪತ್ರಕರ್ತರಿಗೆ ಸೂಕ್ತ ರಕ್ಷಣೆ ಮತ್ತು ಭದ್ರತೆಯನ್ನು ಒದಗಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಮಂಗಳವಾರ ಸೂಚನೆ ನೀಡಿದೆ.

ಪ್ರಜಾಪ್ರಭುತ್ವದಲ್ಲಿ ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮ ಪ್ರಮುಖವಾದದ್ದು. ನಾಗರೀಕರು ಮುಕ್ತವಾಗಿ ಭಯವಿಲ್ಲದೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಇದೊಂದು ವೇದಿಕೆಯಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳಿಗೆ ಭದ್ರತೆ ನೀಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿರುತ್ತದೆ ಎಂದು ಹೇಳಿದೆ.

RELATED ARTICLES  ಮಕರ ಜ್ಯೋತಿ ದರ್ಶನ ಪಡೆದು ಪುನೀತರಾದ ಅಯ್ಯಪ್ಪ ಭಕ್ತರು

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಾಗೂ ಪತ್ರಕರ್ತರ ಮೇಲೆ ನಡೆಸಲಾಗುವ ದಾಳಿಗಳನ್ನು ಕಾಲಕಾಲಕ್ಕೆ ವರದಿ ಮಾಡಿಕೊಳ್ಳಬೇಕು. ಅಲ್ಲದೆ, ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ದಾಳಿಗಳ ಕುರಿತಾದ ತನಿಖೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ. ಪತ್ರಕರ್ತರ ಮೇಲೆ ನಡೆಯುವ ದಾಳಿಗಳನ್ನು ತಡೆಯುವ ಸಲುವಾಗಿ ಹಾಗೂ ಬೆದರಿಕೆಯುಳ್ಳ ಪತ್ರಕರ್ತರ ಭದ್ರತೆ ಕುರಿತಂತೆ ಆಯಾ ರಾಜ್ಯ ಸರ್ಕಾರಗಳು ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಗಳಿಗೆ ಗೃಹ ಸಚಿವಾಲಯ ಸಲಹೆ ನೀಡಿದೆ.

RELATED ARTICLES  ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ : ಸಹಸ್ರಾರು ಭಕ್ತರ ಆಗಮನ.

ಇತ್ತೀಚೆಗಷ್ಟೇ ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆ ಬೆಂಗಳೂರಿನಲ್ಲಿ ನಡೆದಿತ್ತು. ಹತ್ಯೆ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂಥಹದ್ದೊಂದು ಸೂಚನೆ ನೀಡಿದೆ.