ವಿವಿಧ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಲಿಂಕ್ ಮಾಡಲು ಡಿಸೆಂಬರ್ 31, 2017 ರವರೆಗೆ ಇದ್ದ ಅವಕಾಶವನ್ನು ಇದೀಗ ಮಾರ್ಚ್ 31, 2018 ರ ವರೆಗೆ ವಿಸ್ತರಿಸಲಾಗಿದೆ.

ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದು, ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಧಾರ್ ಲಿಂಕ್ ಮಾಡಲು ಹಿಂದೆ ನೀಡಲಾಗಿದ್ದ ಗಡುವನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES  ಅಕ್ಟೋಬರ್ 1ರಂದು ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ 5ಜಿ ಸೇವೆಗೆ ಚಾಲನೆ?

ಮಾರ್ಚ್ 31, 2018 ರವರೆಗೆ ಆಧಾರ್ ಲಿಂಕ್ ಮಾಡಲು ಅವಕಾಶವಿದೆ ಎಂದಿದ್ದಾರೆ. ಮೊಬೈಲ್, ಬ್ಯಾಂಕ್ ಖಾತೆ ಸೇರಿದಂತೆ ವಿವಿಧ ಸೌಲಭ್ಯಗಳಿಗಾಗಿ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡಿರುವುದನ್ನು ಪ್ರಶ್ನಿಸಿ ಹಲವರು ಕೋರ್ಟ್ ಮೆಟ್ಟಿಲೇರಿದ್ದು, ಈ ಹಿನ್ನಲೆಯಲ್ಲಿ ಗಡುವು ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

RELATED ARTICLES  ಕುಮಟಾ ಹೊನ್ನಾವರ ಕ್ಷೇತ್ರಕ್ಕೆ ಅನಂತ್ ಕುಮಾರ್ ಹೆಗಡೆ ಎಂಟ್ರಿ? ಸದ್ದು ಮಾಡುತ್ತಿದೆ ಸುದ್ದಿ