ರಾಜ್ಯ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಸಿವಿಲ್ ಪೊಲೀಸ್ ಹುದ್ದೆಗಳಿಗೆ ಅಕ್ಟೊಬರ್ 27 ಮತ್ತು 28 ರಂದು ದೇಹದಾರ್ಢ್ಯ ಪರೀಕ್ಷೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ನಿಯಮಾನುಸಾರ ದೇಹದಾರ್ಢ್ಯ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗಿದೆ. ಅಕ್ಟೊಬರ್ 27 ಹಾಗು 28 ರಂದು ಕೆ ಎಸ್ ಆರ್ ಪಿ, ನಾಲ್ಕನೇ ಪಡೆ, ಕೋರಮಂಗಲದ ಮೈದಾನದಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಕರೆಪತ್ರದೊಂದಿಗೆ ಹಾಜರಾಗತಕ್ಕದ್ದು.

ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯ ದಿನಾಂಕ ಮತ್ತು ಸಮಯ ಸ್ಥಳವನ್ನು ಹೊಂದಿರುವ ಪ್ರವೇಶ ಪತ್ರಗಳನ್ನು ಪೊಲೀಸ್ ಇಲಾಖೆಯ ಅಂತರ್ಜಾಲದಿಂದ ಅಭ್ಯರ್ಥಿಗಳು ಕಡ್ಡಾಯವಾಗಿ ಡೌನ್ ಲೋಡ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಪ್ರತ್ಯೇಕವಾಗಿ ರವಾನಿಸಲಾಗುವುದಿಲ್ಲ. ಪ್ರವೇಶ ಪತ್ರವಿಲ್ಲದೇ ಪಿ.ಎಸ್.ಟಿ. ಮತ್ತು ಇ.ಟಿ. ಪರೀಕ್ಷೆಗಳಿಗೆ ಅನುವು ಮಾಡಲಾಗುವುದಿಲ್ಲ.

RELATED ARTICLES  STAFF SELECTION COMMISSION : GD CONSTABLE RECRUITMENT

ದೈಹಿಕ ಪರೀಕ್ಷೆ ವಿವರ ಎಲ್ಲಾ ಸಾಮಾನ್ಯ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಕನಿಷ್ಠ ಎತ್ತರ : 168 ಸೆಂ. ಮೀ., ಕನಿಷ್ಠ ಎದೆ ಸುತ್ತಳತೆ :86 ಸೆಂ. ಮೀ (ಪೂರ್ತಿ ವಿಸ್ತರಿಸಿದಾಗ) ಕನಿಷ್ಟ ವಿಸ್ತರಣೆ 5 ಸೆಂ. ಮೀ.

ಮಹಿಳಾ ಅಭ್ಯರ್ಥಿಗಳಿಗೆ: ಕನಿಷ್ಠ ಎತ್ತರ : 157 ಸೆಂ. ಮೀ. ಕನಿಷ್ಠ ತೂಕ: 45 ಕೆ.ಜಿ. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ ಅಭ್ಯರ್ಥಿಗಳಿಗೆ: ಕನಿಷ್ಠ ಎತ್ತರ : 155 ಸೆಂ. ಮೀ. ಎದೆ ಸುತ್ತಳತೆ : 5 ಸೆಂ.ಮೀ.ಗಳ ಕನಿಷ್ಠ ವಿಸ್ತರಿಸುವುದರೊಂದಿಗೆ ಸಂಪೂರ್ಣವಾಗಿ ಹಿಗ್ಗಿಸಿದಾಗ 75 ಸೆಂ.ಮೀ.ಗಳಿಗಿಂತ ಕಡಿಮೆ ಇಲ್ಲದಂತೆ.

RELATED ARTICLES  ಶಿಕ್ಷಕರು ಬೇಕಾಗಿದ್ದಾರೆ.

ನ ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಮಹಿಳಾ ಅಭ್ಯರ್ಥಿಗಳಿಗೆ: ಕನಿಷ್ಠ ಎತ್ತರ : 150 ಸೆಂ. ಮೀ. ದೈಹಿಕ ಪರೀಕ್ಷೆಗೆ ಬರುವಾಗ ಕರೆಪತ್ರದ ಜೊತೆಗೆ ಯಾವುದಾದರೊಂದು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.

ಕರೆಪತ್ರದ ಜೊತೆಗೆ ಆನ್ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ಸಹ ತರತಕ್ಕದ್ದು, ತಪ್ಪಿದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ನಿಗದಿತ ದಿನಾಂಕ ಹಾಗೂ ಸಮಯದಲ್ಲಿ ಹಾಜರಾಗದಿದ್ದರೆ ಅಂತಹವರನ್ನು ಅನರ್ಹ ಗೊಳಿಸಲಾಗುವುದು.