ಸಿದ್ದಾಪುರ: ಅಪ್ರಾಪ್ತೆಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕನೋರ್ವನನ್ನ ಪೊಲೀಸರು ಬಂದಿಸಿದ್ದಾರೆ.
೨೪ ವರ್ಷದ ಸುನೀಲ್ ಮಾದೇವ್ ನಾಯ್ಕ್ ಬಂದಿತ ವ್ಯಕ್ತಿ. ಈತ ೧೩ ವರ್ಷದ ಅಪ್ರಾಪ್ತ ಬಾಲಕಿ ಶಾಲೆಯಿಂದ ಮನೆಗೆ ತೆರಳುವಾಗ ಬೈಕ್ ನಲ್ಲಿ ಅಡ್ಡಗಟ್ಟಿ ಅರಣ್ಯ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ. ತಕ್ಷಣ ಯುವತಿ ಕಿರುಚಿಕೊಂಡಾಗ ಸುತ್ತಮುತ್ತಲಿನ ಜನರು ಬಂದ ಹಿನ್ನಲೆಯಲ್ಲಿ ಬಿಟ್ಟು ಪರಾರಿಯಾಗಿದ್ದ.

RELATED ARTICLES  ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ ಉದ್ಘಾಟನೆ: ಗಮನ ಸೆಳೆದ ಅಹಿಚ್ಛತ್ರ ನಾಟಕ.

ಈ ಸಂಬಂಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಆರೋಪಿ ಸುನೀಲ್ ಈ ಹಿಂದೆ ಸಹ ಇಂತಹ ಕೃತ್ಯ ಮಾಡಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ಎನ್ನಲಾಗಿದ್ದು ಆರೋಪಿಯ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈಗ ಪೂಲೀಸರು ಆತನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ ವಿತರಣೆ.