ದಾಂಡೇಲಿ : ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಶಿರಸಿಯಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ನಗರದ ಜನತಾ ವಿದ್ಯಾಲಯ ಪ್ರೌಢಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿಗಳಾದ ರೋಹಿತ ಗುರುನಾಥ ಮಠಪತಿ ಹಾಗೂ ಸಂಸ್ಕಾರ ಶ್ರೀನಿವಾಸ ಖಂಡೇಲವಾಲ ಇವರು ಅಗ್ರಣೀಯ ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

RELATED ARTICLES  ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ನಡೆಯುತ್ತಿದ್ದ ಕಾರ್ಮಿಕರ ಪ್ರತಿಭಟನೆ ಅಂತ್ಯ: ಮಾಜಿ ಶಾಸಕಿ ಶಾರದಾ ಶೆಟ್ಟಿಯವರಿಗೆ ಅಭಿನಂದಿಸಿದ ಕಾರ್ಮಿಕರು.

ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಹಾಗೂ ನಗರಕ್ಕೆ ಕೀರ್ತಿ ತಂದ ಈ ವಿದ್ಯಾರ್ಥಿಗಳನ್ನು ಜನತಾ ವಿದ್ಯಾಲಯ ಪಿ.ಯು.ಕಾಲೇಜಿನ ಪ್ರಾಚಾರ್ಯರು, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ, ದೈಹಿಕ ಶಿಕ್ಷಣ ಶಿಕ್ಷಕಿ, ಸಂಸ್ಥೆಯ ಎಲ್ಲ ಸಿಬ್ಬಂದಿಗಳು ಹಾಗೂ ಪಾಲಕರು ಅಭಿನಂದಿಸಿ ಶುಭ ಕೋರಿದ್ದಾರೆ.

RELATED ARTICLES  ಭಟ್ಕಳ ರೋಟರಿ ಕ್ಲಬ್ ಪದ ಗ್ರಹಣ ಹಾಗೂ ರೋಟರಿ ಸಂಚಿಕೆ ಬಿಡುಗಡೆ.