ಕಾರವಾರ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಕೂಡಲೇ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಅಖಿಲ ಕರ್ನಾಟಕ ಹಿಂದೂ ಮಡಿವಾಳರ ಸಂಘದ ತಾಲ್ಲೂಕು ಘಟಕದಿಂದ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯದಲ್ಲಿ ಸುಮಾರು ೧೫ರಿಂದ ೧೮ ಲಕ್ಷ ಜನಸಂಖ್ಯೆ ಹೊಂದಿರುವ ಮಡಿವಾಳ ಸಮುದಾಯವು ಹಿಂದುಳಿದ ಜನಾಂಗದ ಸಮುದಾಯಗಳಲ್ಲಿಯೆ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಅತ್ಯಂತ ಕೆಳಸ್ತರದಲ್ಲಿದ್ದು, ಶೋಷಣೆಗೆ ಒಳಪಟ್ಟಿದೆ. ಕರ್ನಾಟಕವಷ್ಟೇ ಅಲ್ಲದೇ, ಇತರ ರಾಜ್ಯಗಳಲ್ಲಿಯೂ ಮಡಿವಾಳ ಸಮುದಾಯವು ಇದೇ ದುಸ್ಥಿತಿಯಲ್ಲಿದೆ. ಹೀಗಾಗಿ ಆಯಾ ರಾಜ್ಯಗಳ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರವು ೧೮ ರಾಜ್ಯಗಳಲ್ಲಿ ಮತ್ತು ೫ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡಿಸಿ, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಸೌಲಭ್ಯಗಳಿಗೆ ಸಂವಿಧಾನಿಕವಾಗಿ ಅವಕಾಶಗಳನ್ನು ಒದಗಿಸಿಕೊಟ್ಟಿದೆ ಎಂದರು.

RELATED ARTICLES  ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಆದರೆ ಈ ರಾಜ್ಯಗಳಂತೆಯೇ ಕರ್ನಾಟಕದಲ್ಲಿಯೂ ಪರಿಶಿಷ್ಟ ಜಾತಿಗೆ ಮಡಿವಾಳ ಸಮುದಾಯವನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

RELATED ARTICLES  ಉತ್ತರಕನ್ನಡದಲ್ಲಿ ಇಂದು 43 ಜನರಲ್ಲಿ ಕೊರೋನಾ ಪಾಸಿಟೀವ್

ಸಂಘದ ಅಧ್ಯಕ್ಷ ಅಶೋಕ ಮಡಿವಾಳ, ಉಪಾಧ್ಯಕ್ಷ ನಾಗೇಶ ಮಡಿವಾಳ, ಪ್ರಧಾನ ಕಾರ್ಯದರ್ಶಿ ಪ್ರದೀಪ ತಲಗೇರಿ, ಕಾರ್ಯದರ್ಶಿ ಶಿವಾನಂದ ಮಡಿವಾಳ, ಆನಂದ ಮಡಿವಾಳ ಹಾಜರಿದ್ದರು.