ಸಿದ್ದಾಪುರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನ. 1 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಲಯನ್ಸ್ ಬಾಲಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ಗಂಗಾಧರ ಕೊಳಗಿ ತಿಳಿಸಿದ್ದಾರೆ.
ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಅರವಿಂದ ಕರ್ಕಿಕೋಡಿ ವಹಿಸಲಿದ್ದು , ನಾಡಿನ ಹಿರಿಯ ಸಾಹಿತಿ ಡಾ. ಎನ್.ಆರ್.ನಾಯಕ ಅವರು ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಶ್ರೀ ಅತ್ತಿಮುರುಡು ವಿಶ್ವೇಶ್ವರ ಹೆಗಡೆ ಅವರು ಪ್ರಶಸ್ತಿ ಪುರಸ್ಕøತರ ಬಗ್ಗೆ ಅಭಿನಂದನಪರ ಮಾತನಾಡಲಿದ್ದಾರೆ.

RELATED ARTICLES  ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ಪ್ರಥಮ ವರ್ಷದ ವಾರ್ಷಿಕೋತ್ಸವ ಸಂಪನ್ನ

ಹಿರಿಯ ಸಾಹಿತಿಗಳಾದ ವನರಾಗ ಶರ್ಮ ಮತ್ತು ಪ್ರೊ.ನಾಗದೇವ ಅಂಕೋಲೆಕರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಹೊನ್ನಾವರದ ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರಕ್ಕೆ ಆಯ್ಕೆ ಆದ ಪ್ರಶಾಂತ ಹಗಡೆ ಮೂಡಲಮನೆ ಹೊನ್ನಾವರ, ನಾಗರಾಜ ಹುಡೇದ ಯಲ್ಲಾಪುರ, ಗಾಯಿತ್ರಿ ರಾಘವೇಂದ್ರ ಶಿರಸಿ, ನರೇಶ ನಾಯ್ಕ ದಾಂಡೇಲಿ ಅವರನ್ನು ಕನ್ನಡದ ಕೃತಿ ಮತ್ತು ಫಲಕ ನೀಡಿ ಗೌರವಿಸಲಾಗುವುದು ಎಂದು ಗಂಗಾಧರ ಕೊಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾಗಿ ಕೆ.ಎಚ್.ಗೌಡ ನೇಮಕ