ನವದೆಹಲಿ: ನೋಟು ನಿಷೇಧ ಮತ್ತು ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿ ಮೂಲಕ ಕೇಂದ್ರ ಸರ್ಕಾರ ಭಾರತ ಆರ್ಥಿಕತೆಯ ಮೇಲೆ ಎರಡು ನೌಕೆಗಳನ್ನು ಉಡಾಯಿಸಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ನೋಟು ನಿಷೇಧ ಮಾಡಿದ್ದ ನವೆಂಬರ್ 8ರಂದು ಆಚರಣೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೇಳುತ್ತಿದೆ. ದೇಶದ ಜನರ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಪ್ರಧಾನಿ ಮೋದಿಗೆ ಸಾಧ್ಯವಾಗಿಲ್ಲ. ನೋಟು ನಿಷೇಧ ಒಂದು ಮಹಾ ದುರಂತ. ನವೆಂಬರ್ 8 ಭಾರತಕ್ಕೆ ದುಖಃದ ದಿನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಭೆಯಲ್ಲಿ ಹೇಳಿದ್ದಾರೆ.

RELATED ARTICLES  ಸಕಲ ಸರ್ಕಾರಿ ಗೌರವದೊಂದಿಗೆ ಶಾಸಕ ವೈ.ಎನ್. ರುದ್ರೇಶ್‍ಗೌಡರ ಪಾರ್ಥಿವ ಶರೀರದ ಅಂತ್ಯಕ್ರಿಯೆ.

ಇದೇ ವೇಳೆ ಜಿಎಸ್ಟಿ ಜಾರಿ ಕುರಿತು ಕಿಡಿಕಾರಿದ ರಾಹುಲ್ ಗಾಂಧಿ, ಜಿಎಸ್ಟಿ ಜಾರಿ ಉತ್ತಮ ಉಪಾಯ. ಆದರೆ ಅದನ್ನು ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರ ಎಡವಿದೆ. ನೋಟು ನಿಷೇಧ ಮತ್ತು ಜಿಎಸ್ಟಿ ಜಾರಿ ಮೂಲಕ ಕೇಂದ್ರ ಸರ್ಕಾರ ಆರ್ಥಿಕತೆಗೆ ದೊಡ್ಡ ಪೆಟ್ಟನ್ನೇ ನೀಡಿದೆ. ಇದರಿಂದ ಆರ್ಥಿಕತೆ ಕುಸಿಯುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಭಾರತೀಯ ಜನತಪಕ್ಷ(ಬಿಜೆಪಿ) ನವೆಂಬರ್ 8ರಂದು ಕಪ್ಪು ಹಣ ವಿರೋಧಿ ದಿನವನ್ನಾಗಿ ಆಚರಿಸುವುದು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮಾತಿನ ಪ್ರಹಾರ ನಡೆಸಿದ್ದಾರೆ.

RELATED ARTICLES  ಜನವರಿ 1ರಿಂದಲೇ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪ್ರಾರಂಭ : ಸಿ.ಎಂ ಸ್ಪಷ್ಟನೆ