ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 1ರ ರಾಜ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಬೇಕಿತ್ತು. ಆದರೆ, ನಾಡಿನ ಉತ್ಸವ ಆಚರಿಸಲು ಅವರಿಗೆ ಉತ್ಸಾಹವಿಲ್ಲ. ಅವರಿಗೆ ನವೆಂಬರ್‌ 10ರ ಟಿಪ್ಪು ಜಯಂತಿ ಆಚರಣೆಗೆ ಹೆಚ್ಚು ಉತ್ಸಾಹ ಇದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅಮಿತ್ ಶಾ, ಟಿಪ್ಪು ಜಯಂತಿ ಆಚರಿಸುವುದರಿಂದ ಕರ್ನಾಟಕದ ಜನತೆಗೆ ಯಾವುದೇ ಲಾಭ ಇಲ್ಲ. ಮತಬ್ಯಾಂಕ್‌ ರಾಜಕಾರಣಕ್ಕಾಗಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಆರಂಭಿಸಿರುವ ಈ ಪರಿವರ್ತನಾ ಯಾತ್ರೆ ಕರ್ನಾಟಕದ ಮುಖ್ಯಮಂತ್ರಿಯನ್ನು ಬದಲಿಸಲು ಮಾತ್ರ ಅಲ್ಲ. ಇದು ಕರ್ನಾಟಕದ ಸ್ಥಿತಿಯನ್ನು ಬದಲಿಸಲು, ‌ಇಲ್ಲಿನ ಕೃಷಿ, ಯುವಕರ ಸ್ಥಿತಿ, ಕಾನೂನು ಸುವ್ಯವಸ್ಥೆ ಬದಲಿಸಲು ಆರಂಭವಾಗಿರುವ ಪರಿವರ್ತನಾ ಯಾತ್ರೆ ಎಂದು ಶಾ ಹೇಳಿದ್ದಾರೆ.

RELATED ARTICLES  ಸಿದ್ದಗಂಗಾ ಶ್ರೀಗಳ ಹೆಸರನ್ನು ಮಧ್ಯೆ ಎಳೆದು ತಂದ ಎಂ ಬಿ ಪಾಟೀಲ್ ವಿರುದ್ಧ ಸಿದ್ದರಾಮಯ್ಯ ಗರಂ

ಯಾವ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲೆಲ್ಲಾ ಉತ್ತಮ ಆಡಳಿತ ನೀಡಿದ್ದೇವೆ. ಆದರೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲ ಅವರು ಭ್ರಷ್ಟರನ್ನು ರಕ್ಷಿಸುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಅನುದಾನ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ. ಆದರೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 2 ಲಕ್ಷ ಕೋಟಿ ರುಪಾಯಿಗೂ ಹೆಚ್ಚು ಅನುದಾನ ನೀಡಿದೆ. ಆದರೆ ಸಿದ್ದರಾಮಯ್ಯ 1 ಲಕ್ಷ ಕೋಟಿಯ ಲೆಕ್ಕ ಮಾತ್ರ ಹೇಳುತ್ತಾರೆ. ಹಾಗಾದರೆ ಉಳಿದ 1 ಲಕ್ಷ ಕೋಟಿಯಷ್ಟು ಹಣ ಎಲ್ಲಿ ಹೋಯಿತು. ಇದು ರಾಜ್ಯದ ಕಾಂಗ್ರೆಸ್‌ನ ಭ್ರಷ್ಟರ ಪಾಲಾಗಿದೆ ಎಂದ ಅಮಿತ್ ಶಾ ವಾಗ್ದಾಳಿ ನಡೆಸಿದರು.

RELATED ARTICLES  ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವು.

ಸಿದ್ದರಾಮಯ್ಯ ಅವರ ಆಡಳಿತದ ಅವಧಿಯಲ್ಲಿ ಕನಿಷ್ಠ 10 ಬಿಜೆಪಿ-ಆರ್‌ಎಸ್ಎಸ್‌ ಕಾರ್ಯಕರ್ತರ ಹತ್ಯೆಯಾಗಿದೆ. ಇದಕ್ಕೆ ನಿಮ್ಮ ಬಳಿ ಉತ್ತರವಿದೆಯೇ? ಎಂದು ಶಾ ಪ್ರಶ್ನಿಸಿದ್ದಾರೆ.