ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ತಿದ್ದುಪಡಿಗಳ ಕಾಯ್ದೆ ವಿರೋಧಿಸಿ ನಾಳೆ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಖಾಸಗಿ ಆಸ್ಪತ್ರೆಯ ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಹೊರರೋಗಿಗಳ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಾಜ್ಯ ಸರ್ಕಾರದ ಈ ಕಾಯ್ದೆಯ ವಿರುದ್ಧ ಜೂನ್ 16ರಂದು ಪ್ರತಿಭಟನೆ ನಡೆಸಿದ್ದವು. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಆರೋಗ್ಯ ಸಚಿವರನ್ನು ಭೇಟಿ ಮಾಡಿ ನಮ್ಮ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿದ್ದೇವು. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರವೀಂದ್ರ ಹೇಳಿದ್ದಾರೆ.

RELATED ARTICLES  ಹೆಗಡೆ ಹೆಣ್ಣುಮಕ್ಕಳ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ.

ವೈದ್ಯರ ಮುಷ್ಕರ ಹಿನ್ನೆಲೆ ನಾಳೆ ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಮಾಡಲಾಗುವುದಿಲ್ಲ. ಸಾಂಕೇತಿಕವಾಗಿ ಹೊರ ರೋಗಿಗಳ ಸೇವೆ ಸ್ಧಗಿತಗೊಳಿಸುತ್ತೇವೆ. ಸರ್ಕಾರ ಆಗಲೂ ಮಾತು ಕಥೆಗೆ ಮುಂದಾಗಿದ್ದರೆ ನವೆಂಬರ್ 9 ಹಾಗೂ 10ರಂದು ವೈದ್ಯ ವೃತ್ತಿಯನ್ನು ತ್ಯಜಿಸುತ್ತೇವೆ ಎಂದು ರವೀಂದ್ರ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು ಐವತ್ತು ಸಾವಿರ ಖಾಸಗಿ ಆಸ್ಪತ್ರೆಗಳಿದ್ದು ಎಲ್ಲಾ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.

RELATED ARTICLES  ಗದ್ದೆಗಳಿಗೆ ಕಾಡು ಹಂದಿಗಳ ಕಾಟ: ಕಂಗಾಲಾಗಿದ್ದಾರೆ ಅನ್ನದಾತರು.