ಭಟ್ಕಳ : ತಾಲೂಕಿನ ಜಾಲಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹಲವು ಸಾಧನೆಗಳನ್ನು ಮಾಡುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಈ ಶಾಲೆಯ ವಿದ್ಯಾರ್ಥಿನಿ ಸಾನಿಯಾ ಅಬ್ದುಲ್ ಖಾದರ್ 3000 ಮೀ. ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಇನ್ನೋರ್ವ ವಿದ್ಯಾರ್ಥಿನಿ ಜಾನಕಿ ಕೆ. ಗೊಂಡ ಎತ್ತರ ಜಿಗಿತ ಹಾಗೂ ತ್ರಿವಿಧ ಜಿಗಿತ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನಗಳನ್ನು ಗಳಿಸಿದರೆ, ಚಿತ್ರಾ ಜಿ. ಗೊಂಡ ಹರ್ಡಲ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇನ್ನೋರ್ವ ವಿದ್ಯಾರ್ಥಿನಿ ಶಾರದಾ ಎಮ್. ಮೊಗೇರ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ಧಾಳೆ.
ಕ್ರೀಡೆ ಮತ್ತು ಶೈಕ್ಷಣಿಕ ಕ್ಷೇತ್ರಗಳೆರಡರಲ್ಲೂ ಮುಂದಿರುವ ಈ ಶಾಲೆಯ ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕಿ ಶ್ರೀಮತಿ ಶಾರದಾ ಅಣ್ಣಪ್ಪ ನಾಯ್ಕ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಮಂಗಲಾ, ಶಿಕ್ಷಕ ವೃಂದದವರು, ಎಸ್.ಡಿ.ಎಮ್.ಸಿ. ಪದಾಧಿಕಾರಿಗಳು ಮತ್ತು ಊರಿನ ನಾಗರಿಕರು ಅಭಿನಂದಿಸಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಜಾಲಿ ಪ್ರೌಢಶಾಲೆಯ ಕ್ರೀಡಾಪಟುಗಳು