ಕಾರವಾರ:ಕಾರವಾರ-ಅಂಕೋಲಾ ವಿಧಾನಸಭಾಕ್ಷೇತ್ರಕ್ಕೆ ಬಸವ ವಸತಿ ಯೋಜನೆಯಡಿ ಮನೆಗಳು ಮಂಜೂರಿಯಾಗಿದ್ದು, ಅವುಗಳನ್ನು ಪಂಚಾಯತವಾರು ಬೇಡಿಕೆಗನುಗುಣವಾಗಿ ಹಂಚಿಕೆ ಮಾಡಲು ಶಾಸಕ ಸತೀಶ ಸೈಲ್ ತಮ್ಮ ಕ್ಷೇತ್ರ ವ್ಯಾಪ್ತಿಯ ಪಂಚಾಯತದ ಅಧ್ಯಕ್ಷರುಗಳಿಗೆ ಪತ್ರ ಬರೆದಿದ್ದಾರೆ.

ಆ ಮೂಲಕ ಗ್ರಾಮ ಪಂಚಾಯತಗಳಲ್ಲಿ ವಸತಿಗಾಗಿ ಅರ್ಜಿ ಸಲ್ಲಿಸಿರುವವರ ಮಾಹಿತಿಯನ್ನು ಸಲ್ಲಿಸಲು ಕೋರಿಕೊಂಡಿದ್ದಾರೆ. ಅಲ್ಲದೇ ತಮ್ಮ ಕ್ಷೇತ್ರಕ್ಕೆ ಹೆಚ್ಚುವರಿ ಮನೆಗಳ ಮಂಜೂರಿಗಾಗಿ ಈಗಾಗಲೇ ವಸತಿ ಸಚಿವರಲ್ಲಿ ಬೇಡಿಕೆಯನ್ನು ಸಲ್ಲಿಸಲಾಗಿದ್ದು, ಒಟ್ಟಾರೆಯಾಗಿ 900 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಮಂಜೂರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

RELATED ARTICLES  ಕೋವಿಡ್ ಹೆಚ್ಚುತ್ತಿದ್ದರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರೇ ಹೆಚ್ಚು.

ಕಾರವಾರದಲ್ಲಿ ಎರಡು ಮತ್ತು ಅಂಕೋಲಾದಲ್ಲಿ ನಾಲ್ಕು ಗ್ರಾಮ ಪಂಚಾಯತಗಳನ್ನು ಸಂಪೂರ್ಣ ವಸತಿ ಸಹಿತರನ್ನಾಗಿ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ.
ಈವರೆಗೂ ವಸತಿಗಾಗಿ ಪಂಚಾಯತ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸದಿದ್ದವರು ನಿಗದಿತ ನಮೂನೆಯಲ್ಲಿ ನವರ 9ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

RELATED ARTICLES  ಬಸ್ ಹಾಗೂ ಬೊಲೆರೋ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ

ಅರ್ಹ ವಸತಿರಹಿತ ಫಲಾನುಭವಿಗಳನ್ನು ಗುರುತಿಸಿ ಸರ್ವರಿಗೂ ಸೂರನ್ನು ಒದಗಿಸಲು ಸರ್ವ ಪ್ರಯತ್ನ ಮಾಡಲಾಗುವುದು ಎಂದೂ ಅವರು ಭರವಸೆ ನೀಡಿದ್ದಾರೆ.