ಹೊನ್ನಾವರ : ಮಹಾತ್ಮಾ ಗಾಂಧಿ ನರೇಗಾ ಯೋಜನೆ ಆರ್ಥಿಕವಾಗಿ ಹಿಂದುಳಿದವರಿಗಾಗಿಯೇ ಇರುವ ಒಂದು ಮಹತ್ವಪೂರ್ಣ ಯೋಜನೆಯಾಗಿದ್ದು, ಸಮಾಜದಲ್ಲಿ ನಿರ್ಗತಿಕರು ಅಸಹಾಯಕರಿಗೆ ಯೋಜನೆ ಆಶಾದೀಪವಾಗಿದೆ. ಪಾರದರ್ಶಕತೆ ಸಾಮಾಜಿಕ ಉತ್ತರದಾಯಿತ್ವ ಉದ್ಯೋಗ ಖಾತ್ರಿ ಯಶಸ್ಸಿನ ಹಿಂದಿನ ಶಕ್ತಿಯಾಗಿದ್ದು, ಪ್ರತಿ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಯುವ ಸಾಮಾಜಿಕ ಪರಿಶೋಧನೆ ಯೋಜನೆಯಲ್ಲಿನ ಫಲಾನುಭವಿಗಳಿಗೆ ಕೂಲಿಕಾರರಿಗೆ ತಮ್ಮ ಅಹವಾಲು ಹೇಳಿಕೊಳ್ಳಲು ಒಂದು ವರದಾನವಿದ್ದಂತೆ. ಕೂಲಿ ವಿಳಂಭವಾದ ಬಗ್ಗೆ ಇಲ್ಲಿ ಅಹವಾಲಿಗೆ ಅವಕಾಶವಿದೆ. ಯೋಜನೆ ಆರ್ಥಿಕ ಬದಲಾವಣೆ ಜೊತೆಗೆ ಜನರ ಮಾನಸಿಕ ಬೌದ್ಧಿಕ ಗುಣಮಟ್ಟವನ್ನು ಹೆಚ್ಚಿಸಿದೆ. ಎಂದು ತಾಲೂಕಾ ಸೋಶಿಯಲ್ ಆಡಿಟರ್ ಉಮೇಶ ಮುಂಡಳ್ಳಿ ಹೇಳಿದರು. ಅವರು ಶನಿವಾರ ತಾಲೂಕಿನ ಬಳಕೂರು ಗ್ರಾಮ ಪಂಚಾಯತನಲ್ಲಿ ನಡೆದ 2017-18ನೇ ಸಾಲಿನ ಎರಡನೇ ಹಂತದ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

RELATED ARTICLES  ಚಿತ್ರಗಿ ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಗೀತಾ ಜಯಂತಿ ಆಚರಣೆ

ಸಾಮಾಜಿಕ ಪರಿಶೋಧನೆಯಿಂದ ಇಂದು ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಪಾರದರ್ಶಕತೆ ಹೆಚ್ಚಾಗಿದೆ. ಸ್ವಯಂ ಪ್ರೇರಿತವಾಗಿ ಗ್ರಾಮಸ್ಥರು ಪಂಚಾಯತ ಕಡೆಗೆ ಮುಖಮಾಡುವಂತಾಗಿದೆ ಸಾಮಾಜಿಕ ಪರಿಶೋಧನೆಯಿಂದ ಸಾಮಾಜಿಕ ಒಳಗೊಳ್ಳುವಿಕೆ ಸಾಧ್ಯ. ಸಾಮಾಜಿಕ ಪರಿಶೋಧನೆ ಗ್ರಾಮ ಪಂಚಾಯತ ಸಿಬ್ಬಂಧಿಗಳ ಕರ್ತವ್ಯ ಮತ್ತು ಕಡತ ನಿರ್ವಹಣೆಯಲ್ಲಿ ಸಾಕಷ್ಟು ಮಾಹಿತಿ ನೀಡುತ್ತಿದೆ. ಇದರಿಂದ ನಿರ್ವಹಣೆಯಲ್ಲಿ ನ್ಯೂನ್ಯತೆಯ ಪ್ರಮಾಣ ಇಳಿಮುಖವಾಗುತ್ತಿದೆ. ಉದ್ಯೋಗ ಖಾತರಿ ಯೋಜನೆಯಿಂದ ರಾಜ್ಯದಲ್ಲಿ ಸಾವಿರಾರು ಕೆರೆಗಳು ಅಭಿವೃದ್ಧಿ ಕಾಣುವಂತಾಗಿದೆ. ಇದರಿಂದ ಒಂದೆ ಅವದಿಯಲ್ಲಿ ನೂರಾರು ಜನರಿಗೆ ಕೂಲಿ ಕೊಡಲು ಸಾಧ್ಯ. ಅಂತರ್ಜಲದ ಮಟ್ಟ ಸುಧಾರಣೆ ಕಾಣುತ್ತಿದೆ. ಹಾಗಾಗಿ ಹೆಚ್ಚು ಹೆಚ್ಚು ಕೆರೆ ಕಾಮಗಾರಿಗಳು ನಡೆಯುವಂತೆ ಆಗಲಿ ಎಂದರು.

ಗ್ರಾಮಮಟ್ಟದಲ್ಲಿ ನಡೆಯುತ್ತಿರುವ ಹಲವು ಯೋಜನೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು, ಅದರ ಪ್ರಯೋಜನಗಳ ಬಗ್ಗೆ ತಿಳಿದುಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವ ಬಗ್ಗೆ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ್ದ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ನಾರಾಯಣ ಹೆಗಡೆ ಹೇಳಿದರು. ಪಂಚಾಯತ ಅಧ್ಯಕ್ಷ ಕೇಶವ ನಾಯ್ಕ ಬಳಕೂರು ಮಾತನಾಡಿದರು. ಸಾಮಾಜಿಕ ಪರಿಶೋಧನಾ ವರದಿಯನ್ನು ಗ್ರಾಮಸಂಪನ್ಮೂಲ ವ್ಯಕ್ತಿ ಎನ್. ಕೆ.ಭಟ್. ಸಭೆಯಲ್ಲಿ ಮಂಡಿಸಿ ಸಭೆಯ ತಿರ್ಮಾನಕ್ಕೆ ಬಿಟ್ಟರು.

RELATED ARTICLES  ಕುಮಟಾದಲ್ಲಿ ನಡೆಯುತ್ತಿದೆ ಹತ್ತು ಶ್ರೀ ವಾಲ್ಮಿಕಿ ರಾಮಾಯಣ ಪಾರಾಯಣ.

ಈ ಅವದಿಯಲ್ಲಿ ನಿರ್ವಹಿಸಿದ ಕಾಮಗಾರಿಗಳ ವಿವರವನ್ನು, ಹಿಂದಿನ ಸಭೆಯ ನಡಾವಳಿಯನ್ನು ಅಭಿವೃದ್ಧಿ ಅಧಿಕಾರಿ ವಿನಾಯಕ ಸಿದ್ದಾಪು ಓದಿ ಹೇಳಿದರು. ಪಂಚಾಯತ ಸದಸ್ಯರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ರಾಜು ನಾಯ್ಕ, ರಾಧಾ ನಾಯ್ಕ ಮತ್ತು ಫಲಾನುಭವಿಗಳು ಹಾಜರಿದ್ದರು. ಸಿಬ್ಬಂದಿ ಸಿಮಾ ಮಡಿವಾಳ ಮತ್ತು ವಿಷ್ಣು ನಾಯ್ಕ ಸಹಕರಿಸಿದರು.