ಮಂಗಳೂರು: ಇಲ್ಲಿನ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಬಳಿ ಮೂವರು ಭದ್ರತಾ ಸಿಬ್ಬಂದಿಯ ಶವ ಪತ್ತೆಯಾಗಿದೆ.

ಭದ್ರತಾ ಸಿಬ್ಬಂದಿಯು ಸಿಡಿಲು ಬಡಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರಲ್ಲಿ ಇಬ್ಬರನ್ನು ಉಮೇಶ್ ಮತ್ತು ಸುನೀಲ್ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿಕೊಟ್ಟಿದ್ದಾರೆ.

RELATED ARTICLES  ಉತ್ತರಕನ್ನಡದ ಇಂದಿನ ಕೊರೋನಾ ಹೆಲ್ತ್ ಬುಲೆಟಿನ್