ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಹೊಸಪೇಟೆ ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 62 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ ದ್ವಿತೀಯ ದರ್ಜೆ ಸಹಾಯಕರು-33 ವೇತನ ಶ್ರೇಣಿ: ರೂ.11600-21000/- ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು.

ಬೆರಳಚ್ಚುಗಾರರು-3 ವೇತನ ಶ್ರೇಣಿ: ರೂ.11600-21000/- ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ವಿಭಾಗದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು.

RELATED ARTICLES  ಜಲಾಶಯದಿಂದ ನೀರು ಹೊರಬಿಡುವ ಎಚ್ಚರಿಕೆ.

ಕಿರಿಯ ಸೇವಕರು-26 ವೇತನ ಶ್ರೇಣಿ: ರೂ.10400-16400/- ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ವಯೋಮಿತಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.

ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ-35 ವರ್ಷ ಒಬಿಸಿ ವರ್ಗ-38 ವರ್ಷ ಪ.ಜಾ/ಪ.ಪಂ/ಪ್ರವರ್ಗ-1-40 ವರ್ಷ ಅರ್ಜಿ ಶುಲ್ಕ ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.600/- +30 ಪೋಸ್ಟಲ್ ಸರ್ವಿಸ್ ಚಾರ್ಜಸ್ ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.300/- +30 ಪೋಸ್ಟಲ್ ಸರ್ವಿಸ್ ಚಾರ್ಜಸ್ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-11-2017 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2017 ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-12-2017 ಅರ್ಜಿ ಸಲ್ಲಿಸಲು ಯಾವುದೇ ರೀತಿಯ ತಾಂತ್ರಿಕ ತೊಂದರೆ ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 8951107408/ 9449434314 ಗೆ ಕರೆಮಾಡಲು ಸೂಚಿಸಲಾಗಿದೆ.

RELATED ARTICLES  ಬಿ.ಎಸ್.ಎನ್.ಎಲ್ ನಿಂದ ಗ್ರಾಹಕರಿಗೆ ಭರ್ಜರಿ ಗಿಫ್ಟ! ಘೋಷಣೆಯಾಯ್ತು ರಾಖಿ ಯೋಜನೆ