ಕುಮಟಾ: ತಾಲೂಕಿನ ವಿವಿದೆಡೆ ನಡೆಯುತ್ತಿರುವ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಇಂದು ಕುಮಟಾ ತಾಲೂಕಿನ ಕೂಜಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆಯಿತು.
ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರು ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಶಾರದಾ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು .
ಸರ್ಕಾರದ ಜನಪರ ಯೋಜನೆಗಳನ್ನು ಜನತೆಗೆ ತಲುಪಿಸುವ ದೃಷ್ಟಿಯಿಂದ ಹಾಗೂ ಚುನಾವಣಾ ಪೂರ್ವ ಸಿದ್ಧತೆಯ ನಿಟ್ಟಿನಲ್ಲಿ ಮನೆ ಮನೆಗೆ ಕಾಂಗ್ರೆಸ್ ಶೀರ್ಷಿಕೆಯಡಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಕಾಂಗ್ರೆಸ್‌ನ ಸಾಧನೆಯನ್ನು ಜನತೆಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್ ನಾಯ್ಕ, ತಾರಾ ಗೌಡ, ಗಜಾನನ ನಾಯ್ಕ ಇನ್ನಿತರರು ಹಾಜರಿದ್ದರು.