ಕುಮಟಾ : ರಾಜ್ಯ ಮಟ್ಟದಲ್ಲಿ 2017 ನವೆಂಬರ್ 23-24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಾನ್ವಯವಾಗುವಂತೆ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆ ರೋಡ್ ಶೋ ಹಮ್ಮಿಕೊಳ್ಳಲಾಗಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗ ಸಭೆ ೨೦೧೭ರ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಮೀನುಗಾರಿಕಾ ಅಭಿವೃದ್ಧಿ ನಿಯಮದ ಅಧ್ಯಕ್ಷ ರಾಜೇಂದ್ರ ನಾಯಕ್ ಉದ್ಘಾಟಿಸಿದ್ರು ನಂತರ ಅವರು ಮಾತನಾಡಿದರು.

RELATED ARTICLES  ಮನೆಯಲ್ಲಿ ಸಂಗ್ರಹಿಸಿಟ್ಟ 75,000 ರೂ. ಮೌಲ್ಯದ ಗಾಂಜಾ ವಶ

IMG 20171109 WA0006
ನಮ್ಮ ಜಿಲ್ಲೆಯಲ್ಲಿ ದೊಡ್ಡ ದೊಡ್ಡ ಕೈಗಾರಿಕಾ ಕೇಂದ್ರಗಳು ಸ್ಥಾಪನೆಯಾಗುವ ಸಂದರ್ಭದಲ್ಲಿ ಪರಿಸರದ ನೆಪವೊಡ್ಡಿ ಡೋಂಗಿ ಪರಿಸರವಾದಿಗಳು ತಮ್ಮ ಸ್ವಾರ್ಥಕ್ಕೆ ಕೈಗಾರಿಕಾ ಕೇಂದ್ರಗಳ ನಿರ್ಮಾಣಕ್ಕೆ ಅಡ್ಡ ಬರುತ್ತಿದ್ದಾರೆ . ಈ ಮೂಲಕ ನಮ್ಮ ಜಿಲ್ಲೆಯ ಅಭಿವೃದ್ಧಿ ಕುಂಠಿತಕ್ಕೆ ಕಾರಣರಾಗಿದ್ದಾರೆ. ಬಂದಿರುವಂಥ ಕೈಗಾರಿಕೆಗಳು ಸ್ಥಾಪನೆಯಾಗಿದಲ್ಲಿ ಇಂದು ನಮ್ಮ ಜಿಲ್ಲೆಯ ಚಿತ್ರಣವೇ ಬದಲಾಗಿರುತ್ತಿತ್ತು ಎಂದ ಅವರು ಇಂದು ನಾವು ಡೋಂಗಿ ಪರಿಸರವಾದಿಗಳ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES  ಇಂದಿನ(ದಿ-25/01/2019) ಉತ್ತರಕನ್ನಡ ಜಿಲ್ಲೆಯ ಪ್ರಮುಖ ತಾಲೂಕುಗಳ ಅಡಿಕೆ ಧಾರಣೆ