ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಗೆ ಇದೇ ಪ್ರಪ್ರಥಮ ಬಾರಿಗೆ ರಾಷ್ಟ್ರಮಟ್ಟದಲ್ಲಿ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಲಭಿಸಿದೆ . ಹೊನ್ನಾವರ ತಾಲೂಕಿನ ಖರ್ವಾ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ಮಹೇಂದ್ರ ಗಣಪತಿ ಗೌಡ ಬೆಳ್ಳಿ ಪದಕ ಪಡೆಯುವುದರ ಮೂಲಕ ಉತ್ತರ ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿದ್ದಾನೆ.

ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಖರ್ವಾ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ಮಹೇಂದ್ರ ಹಿಂದೆಂದೂ ಯಾರೂ ಮಾಡದ ಸಾಧನೆಯನ್ನು ಮಾಡಿ ತೋರಿಸಿದ್ದಾನೆ . ಈತ ಯೋಗ ಪಟು ಶ್ರೀಮತಿ ರಾಜೇಶ್ವರಿಯವರ ಶಿಷ್ಯನಾಗಿದ್ದು, ಯೋಗದಲ್ಲಿ ಅಪಾರ ಆಸಕ್ತಿ ಹೊಂದಿದ್ದನು.

RELATED ARTICLES  ಹೊನ್ನಾವರ - ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಶಿಕ್ಷೆ!

ಚಿಕ್ಕ ವಯಸ್ಸಿನಿಂದ ಯೋಗದ ಅಭ್ಯಾಸದಲ್ಲಿ ತೊಡಗಿಕೊಂಡಿದ್ದ ಈತ ಖರ್ವಾದ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದಾನೆ . ಜಿಲ್ಲಾಮಟ್ಟ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದಿದ್ದ ಈತ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಉತ್ತರ ಕನ್ನಡದ ಹೆಮ್ಮೆಯ ಕಂದನಾಗಿ ಹೊರ ಹೊಮ್ಮಿದ್ದಾನೆ.

RELATED ARTICLES  ದೇಶದಲ್ಲಿ ಗಣನೀಯ ಏರಿಕೆ ಕಂಡ ಕೋವಿಡ್..!

ಈತನಿಗೆ ಈತನ ಕುಟುಂಬದವರು ಶಾಲಾ ಶಿಕ್ಷಕರು ಮುಖ್ಯ ಶಿಕ್ಷಕರು ಹಾಗೂ ಊರಿನ ನಾಗರಿಕರು ಶುಭಾಶಯ ಕೋರಿದ್ದಾರೆ .