ಮನಿಲಾ: ಫಿಲಿಫೈನ್ಸ್ ನ ಮನಿಲಾದಲ್ಲಿ ನಡೆಯುತ್ತಿರುವ ಅಷಿಯಾನ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭದ್ರತೆ ಮತ್ತು ರಕ್ಷಣೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳು ಕುರಿತು ಚರ್ಚೆ ನಡೆಸಿದ್ದಾರೆ.

ಫಿಲಿಪೈನ್ಸ್ ರಾಜಧಾನಿಯಲ್ಲಿ ನಡೆದ ಅಷಿಯಾನ್ ಶೃಂಗ ಸಭೆಯಲ್ಲಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾದ ಅಧಿಕಾರಿಗಳು ಇಂಡೋ-ಪೆಸಿಫಿಕ್ ಪ್ರದೇಶವನ್ನು ಮುಕ್ತ ಮತ್ತು ಅಂತರ್ಗತ ಪ್ರದೇಶವನ್ನು ಉಳಿಸಿಕೊಳ್ಳುವ ಕುರಿತು ಚತುರ್ಭುಜ ಮೈತ್ರಿ ಬಗ್ಗೆ ಹೆಚ್ಚು ಮಾತುಕತೆ ನಡೆಸಲಾಯಿತು.

RELATED ARTICLES  ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಜಾರ್ಜ್, ಪ್ರಸಾದ್, ಮೊಹಂತಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಸಿಬಿಐ

ನಂತರ ನಡೆದ ಭಾರತ ಮತ್ತು ಅಮೆರಿಕ ನಡುವಿ ದ್ವಿಪಕ್ಷೀಯ ಮಾತುಕತೆಯಲ್ಲಿ ಉಭಯ ದೇಶದ ಪ್ರಧಾನಿಗಳು ದ್ವಿಪಕ್ಷೀಯ ವ್ಯಾಪಾರವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳೂ ಸೇರಿದಂತೆ, ಭದ್ರತಾ ಸನ್ನಿವೇಶದಲ್ಲಿ ಪರಸ್ಪರ ಸಂಬಂಧಗಳ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು.

ದಕ್ಷಿಣ ಚೀನಾ ಸಮುದ್ರದಲ್ಲಿ ಚೀನ ಬೆಳೆಯುತ್ತಿರುವುದಕ್ಕೆ ತಡೆಯೊಡ್ಡುವ ಸಲುವಾಗಿ ಚತುಷ್ಪಥೀಯ ಮೈತ್ರಿಯನ್ನು ಸ್ಥಾಪಿಸಲು ಮುಂದಾಗಿದ್ದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಭಾರತ ಆಧಿಪತ್ಯ ಸ್ಥಾಪಿಸುವುದಕ್ಕೆ ಅಮೆರಿಕ ದೊಡ್ಡ ಪಾತ್ರ ವಹಿಸುತ್ತಿದೆ.

RELATED ARTICLES  ಗೋವಿಗಾಗಿ ಆಮರಣಾಂತ ಉಪವಾಸ: ಒಬ್ಬರ ಬಲಕ್ಕೀಗ ಹಲವರು!

ದ್ವಿಪಕ್ಷೀಯ ಮಾತುಕತೆ ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮೊದಲಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಅಮೆರಿಕಾದ ಬೆಂಬಲ ಸದಾ ಇರುತ್ತದೆ. ಭಾರತಕ್ಕೆ ಬೆಂಬಲ ನೀಡುತ್ತಿರುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಭಯೋತ್ಪಾದನೆ, ಭದ್ರತೆ ಮತ್ತು ರಕ್ಷಣೆ ಸೇರಿದಂತೆ ಇನ್ನು ಹಲವು ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಲಾಯಿತು ಎಂದರು.