ಹೊನ್ನಾವರ : ಮಹಾತ್ಮಾ ಗಾಂಧಿ ನರೇಗಾ ಯೋಜನೆ ಆರ್ಥಿಕವಾಗಿ ಹಿಂದುಳಿದವರಿಗಾಗಿಯೇ ಇರುವ ಒಂದು ಮಹತ್ವಪೂರ್ಣ ಯೋಜನೆಯಾಗಿದ್ದು, ಸಮಾಜದಲ್ಲಿ ನಿರ್ಗತಿಕರು ಅಸಹಾಯಕರಿಗೆ ಯೋಜನೆ ಆಶಾದೀಪವಾಗಿದೆ. ಬೆಳಕು ಎಲ್ಲಿಂದಲೇ ಬರಲಿ ಬೆಳಕಿಗೆ ತಾರತಮ್ಯವಿಲ್ಲ. ಯೋಜನೆ ಆರ್ಥಿಕ ಬದಲಾವಣೆ ಜೊತೆಗೆ ಜನರ ಮಾನಸಿಕ ಬೌದ್ಧಿಕ ಗುಣಮಟ್ಟವನ್ನು ಹೆಚ್ಚಿಸಿದೆ. ಎಂದು ತಾಲೂಕಾ ಸೋಶಿಯಲ್ ಆಡಿಟರ್ ಉಮೇಶ ಮುಂಡಳ್ಳಿ ಹೇಳಿದರು. ಅವರು ಮಂಗಳವಾರ ತಾಲೂಕಿನ ಮಾಗೋಡು ಗ್ರಾಮ ಪಂಚಾಯತನಲ್ಲಿ ನಡೆದ 2017-18ನೇ ಸಾಲಿನ ಎರಡನೇ ಹಂತದ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

RELATED ARTICLES  ಜಿಲ್ಲೆಯ ಎಲ್ಲಾ ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು : ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಲ್. ಚಂದ್ರಶೇಖರ ನಾಯಕ.

ಸಾಮಾಜಿಕ ಪರಿಶೋಧನೆಯಿಂದ ಇಂದು ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಪಾರದರ್ಶಕತೆ ಹೆಚ್ಚಾಗಿದೆ. ಸ್ವಯಂ ಪ್ರೇರಿತವಾಗಿ ಗ್ರಾಮಸ್ಥರು ಪಂಚಾಯತ ಕಡೆಗೆ ಮುಖಮಾಡುವಂತಾಗಿದೆ ಸಾಮಾಜಿಕ ಪರಿಶೋಧನೆಯಿಂದ ಸಾಮಾಜಿಕ ಒಳಗೊಳ್ಳುವಿಕೆ ಸಾಧ್ಯ . ಮಾಗೋಡು ಪಂಚಾಯತದದಲ್ಲಿ ಜನರಿಗೆ ಸಾಕಷ್ಟು ಮಾಹಿತಿ ನೀಡುವ ಅಗತ್ಯತೆ ಇದೆ .ಕಾಮಗಾರಿ ಅತಿ ಕಡಿಮೆಯಾಗಿದ್ದು ಸ್ವ ಸಹಾಯ ಸಂಘದ ಇನ್ನಿತರ ಸಂಘ ಸಂಸ್ಥೆಗಳಿಗೆ ತೆ ಬಗ್ಗೆ ತಿಳಿಸಿದರು.

ಗ್ರಾಮಮಟ್ಟದಲ್ಲಿ ನಡೆಯುತ್ತಿರುವ ಹಲವು ಯೋಜನೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು, ಅದರ ಪ್ರಯೋಜನಗಳ ಬಗ್ಗೆ ತಿಳಿದುಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವ ಬಗ್ಗೆ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ್ದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ ನಾಯ್ಕ ಹೇಳಿದರು. . ಸಾಮಾಜಿಕ ಪರಿಶೋಧನಾ ವರದಿಯನ್ನು ಗ್ರಾಮಸಂಪನ್ಮೂಲ ವ್ಯಕ್ತಿ ಪ್ರಶಾಂತ ಮುಕ್ರಿ ಸಭೆಯಲ್ಲಿ ಮಂಡಿಸಿ ಸಭೆಯ ತಿರ್ಮಾನಕ್ಕೆ ಬಿಟ್ಟರು.

RELATED ARTICLES  ಗಂಗಾವಳಿ, ತಡಡಿ, ಅಘನಾಶಿನಿ, ಕುಮಟಾ ರಸ್ತೆಗೆ ಭೂಮಿಪೂಜೆ ನೆರವೇರಿಸಿದ ಶಾಸಕಿ ಶಾರದಾ ಶೆಟ್ಟಿ.

ಈ ಅವದಿಯಲ್ಲಿ ನಿರ್ವಹಿಸಿದ ಕಾಮಗಾರಿಗಳ ವಿವರವನ್ನು, ಹಿಂದಿನ ಸಭೆಯ ನಡಾವಳಿಯನ್ನು ಅಭಿವೃದ್ಧಿ ಅಧಿಕಾರಿ ಎಮ್.ಎನ್.ನಾಯ್ಕ ಓದಿ ಹೇಳಿದರು. ಪಂಚಾಯತ ಅಧ್ಯಕ್ಷೆ ವಿನೋದಾ ನಾಯ್ಕ. ಉಪಾಧ್ಯಕ್ಷ ವೆಂಕಟೇಶ ಮೇಸ್ತಾ ಸದಸ್ಯರು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಅಜೀತ್ ನಾಯ್ಕ, ಅಕ್ಷತಾ ನಾಯ್ಕ ಮತ್ತು ಫಲಾನುಭವಿಗಳು ಹಾಜರಿದ್ದರು.