ಬೆಂಗಳೂರು: ಖಾಸಗಿ ವೈದ್ಯರ ಮುಷ್ಕರ ವಿರೋಧಿಸಿ ವಕೀಲ ಎನ್ ಪಿ ಅಮೃತೇಶ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಏತನ್ಮಧ್ಯೆ ವಕೀಲ ಅಮೃತೇಶ್ ಅವರು ಖಾಸಗಿ ವೈದ್ಯರ ಪ್ರತಿಭಟನೆ ವಿರೋಧಿಸಿ ಪಿಐಎಲ್ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.

RELATED ARTICLES  ಇಂದಿನ ಕೊರೋನಾ Update :ಎಲ್ಲೆಲ್ಲಿ ಎಷ್ಟೆಷ್ಟು ಪ್ರಕರಣ ಗೊತ್ತೇ?

ಕರ್ನಾಟಕ ಖಾಸಗಿ ಆಸ್ಪತ್ರೆ ನಿಯಂತ್ರಣ ಕಾಯಿದೆ(ಕೆಪಿಎಂಇ) ತಿದ್ದುಪಡಿ ವಿಧೇಯಕ ವಿರೋಧಿಸಿ ಸಾವಿರಾರು ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದ ಪರಿಣಾಮ ರೋಗಿಗಳು ಪರದಾಡುವಂತಾಗಿದೆ.

RELATED ARTICLES  ಉತ್ತರಕನ್ನಡದ ಇಂದಿನ ಕೊರೋನಾ ವಿವರ ಇಲ್ಲಿದೆ.

ಅಲ್ಲದೇ ಗುರುವಾರ ಬೆಂಗಳೂರಿನಲ್ಲಿರುವ ಆರು ಸಾವಿರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರಿಗೆ ಬೆಂಬಲ ನೀಡಲು ವೈದ್ಯರ ಸಂಘ ನಿರ್ಧರಿಸಿದೆ.