ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ”ಡಿಸೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಸರ್ಕಾರಕ್ಕೆ ಮಾತೆ ಮಹಾದೇವಿ ಗಡುವು ನೀಡಿದರು.

ಲಿಂಗಾಯತ ಪ್ರತ್ಯೇಕ ಧರ್ಮವನ್ನಾಗಿಸಿ ಸಂವಿಧಾನಿಕ ಮಾನ್ಯತೆ ನೀಡಬೇಕೆಂದು ಹೋರಾಟ ತೀವ್ರಗೊಂಡಿದೆ. ಈ ನಡುವೆ ಇಂದು ಬಸವನ ಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಲಿಂಗಾಯತ ಧರ್ಮೀಯರ ರಾಷ್ಟ್ರೀಯ ಸಮಾವೇಶದಲ್ಲಿಉ ಮಾತನಾಡಿದ ಮಾತೆ ಮಹಾದೇವಿ, ”ಡಿಸೆಂಬರ್ 30 ರ ಒಳಗೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು. ವಿಧಾನಸಭೆ ಚುನಾವಣೆ ಮುನ್ನ ಲಿಂಗಾಯತ ಪ್ರತ್ಯೇಕ ಧರ್ಮವೆಂದು ಘೋಷಿಸಬೇಕು. ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿಸಿಬೇಕು ಎಂದು ಒತ್ತಾಯಿಸಿದರು.

RELATED ARTICLES  ಶ್ರೀ ಶ್ರೀ ರಾಘವೇಶ್ವರ ಸ್ವಾಮೀಜಿ ನಕಲಿ ಸಿಡಿ ಪ್ರಕರಣಕ್ಕೆ ಮರು ಜೀವ ಕೊಟ್ಟ ಸಚಿವ ಸಂಪುಟ : ಶ್ರೀಮಠಕ್ಕೆ ಮತ್ತೆ ಮುನ್ನಡೆ

ಜತೆಗೆ ಕೂಡಲೇ ಜಾತಿ ಪ್ರಮಾಣ ಪತ್ರಗಳಲ್ಲಿ ವೀರಶೈವ ಲಿಂಗಾಯತ ಎನ್ನುವುದನ್ನು ರದ್ದುಪಡಿಸಬೇಕು’ ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.