ಬೆಳಗಾವಿ : ದೇವಾಲಯಗಳಿಗೆ ಆಡಳಿತ ಸಮಿತಿ ರಚಿಸುವ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸಿ ಉಸ್ತುವಾರಿ ಸಚಿವರಾದ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಲಾಯಿತು .

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅವರ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿ ಅವರಿಗೆ ಮನವಿ ಸಲ್ಲಿಸಲಾಯಿತು .

ದೇವಾಲಯಗಳ ಸಮಿತಿಯ ಪರವಾಗಿ ಮನವಿ ಸಲ್ಲಿಸಲಾಯಿತು . ಮನವಿ ಸಲ್ಲಿಸಿದ ಮಾರಿಕಾಂಬಾ ದೇವಾಲಯದ ಅಧ್ಯಕ್ಷ ವೆಂಕಟೇಶ ನಾಯ್ಕ ಮಾತನಾಡಿ ದೇವಾಲಯಗಳಿಗೆ ಆಡಳಿತ ಸಮಿತಿಯ ನೇಮಕ ಮಾಡುವ ನಿರ್ಧಾರವನ್ನು ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು .

RELATED ARTICLES  ಕುಮಟಾದ ಹೆಗಡೆಯಲ್ಲಿ ಮನೆ ನಿರ್ಮಾಣದ ಸಂದರ್ಭದಲ್ಲಿ ಅವಘಡ: ಸೆಂಟ್ರಿಂಗ್ ಕೆಲಸಗಾರ ಸಾವು!!

ಈ ಸಂದರ್ಭದಲ್ಲಿ ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರು ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಶಾರದಾ ಶೆಟ್ಟಿ ಸ್ಥಳದಲ್ಲಿ ಹಾಜರಿದ್ದರು .

RELATED ARTICLES  ದಿನದಿಂದ ದಿನಕ್ಕೆ ಹೆಚ್ಚುತ್ತಿದೆ 'ದಿನಕರ'ರ ಪ್ರಭಾವ.

ಪಾರಂಪರಿಕ ದೇವಾಲಯಗಳಿಗೆ ಸರ್ಕಾರ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡುವ ಮೂಲಕ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಲಾಯಿತು .