ಯಲ್ಲಾಪುರ: ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿ ಸಾರಾಯಿ ಪ್ಯಾಕೇಟ್ ಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಗುಳ್ಳಾಪುರದ ಜನತಾ ಕಾಲನಿಯಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಯಲ್ಲಾಪುರ ಪೊಲೀಸರು ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಅನಂತ ದೇವಪ್ಪ ಬಾಂದಿ(29) ಎನ್ನುವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 81 ಸಾರಾಯಿ ಪ್ಯಾಕೇಟ್ ವಶಪಡಿಸಿಕೊಂಡಿದ್ದಾರೆ.

RELATED ARTICLES  ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಗೆ ಮರಳಿದ ಭಟ್ಕಳ ಮಾಜಿ ಶಾಸಕ ಜೆ.ಡಿ ನಾಯ್ಕ

ಸಾರಾಯಿ ಪ್ಯಾಕೇಟ್ ಗಳನ್ನು ಯಲ್ಲಾಪುರದಿಂದ ತಂದು ಗುಳ್ಳಾಪುರದ ತನ್ನ ಮನೆಯಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಸಾರಾಯಿ ಮೌಲ್ಯ 4500 ರೂ. ಎಂದು ಅಂದಾಜಿಸಲಾಗಿದೆ.

RELATED ARTICLES  ಯಶಸ್ವಿಯಾಗಿ ಸಂಪನ್ನವಾದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ.

ಸಿ.ಪಿ.ಐ ಡಾ.ಮಂಜುನಾಥ ನಾಯಕ ಹಾಗೂ ಪಿ.ಎಸ್ ಐ ಲಕ್ಕಪ್ಪ ನಾಯ್ಕ ಮಾರ್ಗದರ್ಶನದಲ್ಲಿ ಎ.ಎಸ್.ಐ ನಾರಾಯಣ ರಾಥೋಡ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.