ಹೊನ್ನಾವರ : ತಾಲೂಕಿನ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಇಂದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

೧೪ ವರ್ಷ ವಯೋಮಿತಿಯ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟ ಅಂಕೊಲಾದಲ್ಲಿ ನಡೆದಿತ್ತು. ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ತಾಲೂಕಿನ ೧೩ ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ರಾಜ್ಯಮಟ್ಟಕ್ಕೆ ಆಯ್ಕೆಯಾದ ಈ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಟ್ರ್ಯಾಕ್ ಶೂ ವಿತರಣೆ ಮಾಡಿದರು.

RELATED ARTICLES  ಕೊಂಕಣಿ ಜಾನಪದ ಪ್ರಶಸ್ತಿಗೆ ಕುಮುದಾ ಆಯ್ಕೆ

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿಗಳಾದ ಗಿರೀಶ್ ಪದಕಿ, ದೈಹಿಕ ಶಿಕ್ಷಕ ಸಂಘದ ಜಿಲ್ಲಾಧ್ಯ್ಷರಾದ ಸಾಧನ ಬರ್ಗಿ ಅಕ್ಷರ ದಾಸೋಹ ಅಧಿಕಾರಿಗಳಾದ ಸುರೇಶ್ ನಾಯ್ಕ್, ಬಾಬು ನಾಯ್ಕ್ ಉಪಸ್ಥಿತರಿದ್ದರು.

RELATED ARTICLES  ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ