ಸಿದ್ಧಾಪುರ : ಹೊಸದಾಗಿ ಅರಣ್ಯ ಪ್ರದೇಶಗಳನ್ನು ಅತಿಕ್ರಮಣ ಮಾಡಿಕೊಳ್ಳಲು ರೈತರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ವಿಶೇಶ್ವರ ಹೆಗ್ಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ.

ನಗರದ ತಾಪಂ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಕಾಗೇರಿಯವರು, ಈಗಾಗಲೇ ಜಿಪಿಎಸ್ ಅಳವಡಿಸಿರುವ ಪ್ರದೇಶಗಳಲ್ಲಿ ಮನೆ ಹಾಗೂ ಶೌಚಾಲಯ ಕಟ್ಟಿಕೊಳ್ಳುವುದಕ್ಕೆ ಅವಕಾಶ ನೀಡುತ್ತಿಲ್ಲ. ಅಧಿಕಾರಿಗಳಿಗೆ ಸ್ವಲ್ಪ ಮಾನವೀಯತೆಬೇಕು. ನಿಮ್ಮ ಕೆಳಗಿನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸೂಚನೆ ನೀಡಬೇಕು. ಇಲ್ಲದಿದ್ದರೆ ನಾವೇ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕರು ತಾಲೂಕಿನ ಎಲ್ಲ ಆರ್.ಎಫ್.ಓ.ಗಳಿಗೆ ಸೂಚನೆ ನೀಡಿದರು.

RELATED ARTICLES  ಚಿರನಿದ್ದೆಗೆ ಜಾರಿದಯುವ ಸಿ.ಎ.ವಿಷ್ಣು ಹೆಬ್ಬಾರ

ಅರಣ್ಯ ಉಪ ವಲಯ ಅರಣ್ಯಾಧಿಕಾರಿ ಹಾಗೂ ಗಾರ್ಡಗಳು ಆರ್‍ಎಫ್‍ಓಗಳ ಮಾತನ್ನು ಕೇಳುತ್ತಿಲ್ಲ. ಬಡವರಿಗೆ ಮನೆ ಕಟ್ಟಿಕೊಳ್ಳುವುದಕ್ಕೂ ಅವಕಾಶ ನೀಡುತ್ತಿಲ್ಲ. ನೀವೇನು ಮಾಡುತ್ತಿದ್ದಿರಿ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಿದ್ದಾಪುರ ತಾಲೂಕು ನಂಜುಂಡಪ್ಪ ವರದಿಯಲ್ಲಿ ಹಿಂದುಳಿದ ತಾಲೂಕು ಎಂದಿದ್ದರೂ, ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಅನುದಾನ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ. ಇನ್ನುಳಿದ ತಾಲೂಕಿಗೆ ಹೆಚ್ಚು ಅನುದಾನ ನೀಡಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.

RELATED ARTICLES  ಉಳವಿ ಚನ್ನಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ

ಸಭೆಯಲ್ಲಿ ತಾಪಂ ಅಧ್ಯಕ್ಷ ಸುಧೀರ್ ಬಿ.ಗೌಡರ್, ಉಪಾಧ್ಯಕ್ಷೆ ದಾಕ್ಷಾಯಣಿ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಮಾಬ್ಲೇಶ್ವರ ಹೆಗಡೆ, ಜಿಪಂ ಸದಸ್ಯ ಎಂ.ಜಿ.ಹೆಗಡೆ, ನಾಗರಾಜ ನಾಯ್ಕ, ತಾಪಂ ಸಿಇಒ ಶ್ರೀಧರ ಭಟ್ಟ, ತಹಶೀಲ್ದಾರ್ ಪುಟ್ಟರಾಜಗೌಡ ಉಪಸ್ಥಿತರಿದ್ದರು.